• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅರ್ಧ ಪ್ಯಾಂಟ್ ಧರಿಸಿ ನಿಂತು ಭಾಷಣ ಮಾಡುವುದು ರಾಷ್ಟ್ರೀಯತೆಯಲ್ಲ: ಸಚಿನ್

|

ಅರ್ಧ ಪ್ಯಾಂಟ್ ಧರಿಸಿ ನಿಂತು ಭಾಷಣ ಮಾಡುವುದು ರಾಷ್ಟ್ರೀಯತೆಯಲ್ಲ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

ಕಾಯ್ದೆಯಲ್ಲಿ ತಿದ್ದುಪಡಿ ಮಾಡುವುದು, ಅವುಗಳನ್ನು ಹಿಂತೆಗೆದುಕೊಳ್ಳುವುದು ಅಥವಾ ತಪ್ಪನ್ನು ಒಪ್ಪಿಕೊಳ್ಳುವುದು ಇವೆಲ್ಲವೂ ನಾಯಕರ ವರ್ಚಸ್ಸನ್ನು ಹೆಚ್ಚಿಸುತ್ತದೆ. ಇದು ನಾಚಿಕೆಗೇಡಿನ ವಿಷಯವಲ್ಲ ಎಂದು ಸಲಹೆ ಮಾಡಿದರು.

ರೈತರ ಬೇಡಿಕೆಗಳು ತಕ್ಷಣದಿಂದ ಜಾರಿಯಾಗಲಿ: ಸಚಿನ್ ಪೈಲಟ್

ರಾಷ್ಟ್ರೀಯತೆ ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಿಂದ ಫೋನ್ ಭಾಷಣಗಳನ್ನು ಮಾಡುವುದಲ್ಲ, ರೈತರ ಕಲ್ಯಾಣದ ಬಗ್ಗೆ ಮಾತನಾಡಿದರೆ ಅದುವೇ ನಿಜವಾದ ರಾಷ್ಟ್ರೀಯತೆ ಎಂದರು.

ಕೆಲವು ಕಾಯ್ದೆಗಳನ್ನು ಹಿಂಪಡೆಯುವುದರಿಂದ ಯಾವುದೇ ತೊಂದರೆಯಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಅವರು ಕಾನೂನುಗಳನ್ನು ಹಿಂತೆಗೆದುಕೊಂಡರೆ ನಾವು ಧನ್ಯವಾದ ಸಲ್ಲಿಸಲಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಸಚಿನ್ ಪೈಲಟ್ ಆಗ್ರಹಿಸಿದರು. ಇದು ಕೇಂದ್ರ ಸರ್ಕಾರದಿಂದ ಬಗೆಹರಿಸಲು ಸಾಧ್ಯವಾಗದಷ್ಟು ಸಂಕೀರ್ಣ ಸಮಸ್ಯೆಯಲ್ಲ ಎಂದು ಹೇಳಿದರು.

English summary
If you talk about the welfare of farmers than that is what real nationalism is. Nationalism is not delivering phoney speeches from Nagpur wearing half-pants," Pilot said without naming Rashtriya Swayamsevak Sangh as he referred RSS headquarters in Nagpur, Maharashtra in his speech.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X