Breaking; ಬಾಂಬೆ ಹೈಕೋರ್ಟ್ ಮೊರೆ ಹೋದ ನವನೀತ್ ಕೌರ್ ದಂಪತಿ
ಮುಂಬೈ, ಏಪ್ರಿಲ್ 25; ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ, ಆಕೆಯ ಪತಿ ರಾಣಾ ಕೌರ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪೊಲೀಸರು ದಾಖಲು ಮಾಡಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದಾರೆ.
ಹನುಮಾನ್ ಚಾಲೀಸಾ ವಿವಾದದ ಹಿನ್ನಲೆಯಲ್ಲಿ ಪೊಲೀಸರು ಸಂಸದೆ ನವನೀತ್ ಕೌರ್ ರಾಣಾ, ಆಕೆಯ ಪತಿ ರಾಣಾ ಕೌರ್‌ರನ್ನು ಬಂಧಿಸಿದ್ದಾರೆ. ನ್ಯಾಯಾಲಯ ಅವರನ್ನು 14 ದಿನಗಳ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸೋಮವಾರ ದಂಪತಿಗಳು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ 12.30ಕ್ಕೆ ಅರ್ಜಿಯ ವಿಚಾರಣೆ ನಡೆಸಲಿದೆ. ನ್ಯಾಯಾಲಯ ಯಾವ ಆದೇಶ ಪ್ರಕಟಿಸಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ನಿವಾಸದ ಹೊರಗೆ ಹುನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿದ್ದ ನವನೀತ್ ಕೌರ್ ರಾಣಾ, ರಾಣಾ ಕೌರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ದಂಪತಿಗಳ ವಿರುದ್ಧ ಐಪಿಸಿ ಸೆಕ್ಷನ್ 153 (ಎ), ಮುಂಬೈ ಪೊಲೀಸ್ ಕಾಯ್ದೆಯ ಸೆಕ್ಷನ್ 135ರ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ದಂಪತಿಗಳು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶನಿವಾರ ರಾತ್ರಿ ದಂಪತಿಗಳನ್ನು ಬಂಧಿಸಿದ್ದ ಪೊಲೀಸರು ಭಾನುವಾರ ಕೋರ್ಟ್‌ಗೆ ಹಾಜರುಪಡಿಸಿದ್ದರು. ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ನಿವಾಸದ ಹೊರಗೆ ಹುನುಮಾನ್ ಚಾಲೀಸಾ ಪಠಿಸುವ ತೀರ್ಮಾನ ವಾಪಸ್ ಪಡೆದಿದ್ದೇವೆ ಎಂದು ಶನಿವಾರ ದಂಪತಿಗಳು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದರು. ಆದರೂ ಸಹ ಶನಿವಾರ ರಾತ್ರಿ ದಂಪತಿಗಳ ಬಂಧನವಾಗಿತ್ತು.











Click it and Unblock the Notifications