ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಲಿವುಡ್ ಡ್ರಗ್ಸ್ ಪ್ರಕರಣ; ಎನ್‌ಸಿಬಿ ಪೊಲೀಸರ ವಶದಲ್ಲಿ ಡ್ರಗ್ ಪೆಡ್ಲರ್

|
Google Oneindia Kannada News

ಮುಂಬೈ, ಡಿಸೆಂಬರ್ 09: ಬಾಲಿವುಡ್ ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ ಪೆಡ್ಲರ್ ‌ಒಬ್ಬನನ್ನು ಎನ್‌ಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಟಿ ರಿಯಾ ಚಕ್ರವರ್ತಿ ಹಾಗೂ ಸಹೋದರ ಶೌವಿಕ್ ಚಕ್ರವರ್ತಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ರೆಗೆಲ್ ಮಹಕಲ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ಆರಂಭವಾದ ಮೇಲೆ ರೆಗೆಲ್ ಮಹಕಲ್ ತಲೆಮರೆಸಿಕೊಂಡಿದ್ದನು. ಮುಂಬೈನ ಪಶ್ಚಿಮ ಉಪನಗರದಲ್ಲಿ ಎನ್‌ಸಿಬಿ ತಂಡ ಈತನನ್ನು ಬುಧವಾರ ಬಂಧಿಸಲಾಗಿದೆ.

ನಟ ಸುಶಾಂತ್ ಸಿಂಗ್ ಸಾವಿನ ಕೇಸ್: ನ್ಯಾಯ ಕೇಳಿದ ನಾಯಕರು ಮೌನಕ್ಕೆ ಶರಣುನಟ ಸುಶಾಂತ್ ಸಿಂಗ್ ಸಾವಿನ ಕೇಸ್: ನ್ಯಾಯ ಕೇಳಿದ ನಾಯಕರು ಮೌನಕ್ಕೆ ಶರಣು

ಡ್ರಗ್ಸ್ ವಿಚಾರವಾಗಿ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರಿಗೆ ರೆಗೆಲ್ ಮಹಕಲ್ ಡ್ರಗ್ ಪೆಡ್ಲರ್ ಎಂಬ ವಿಚಾರ ತಿಳಿದುಬಂದಿತ್ತು. ಸುಶಾಂತ್ ಸಾವಿನ ನಂತರ ಆತ ತಲೆ ಮರೆಸಿಕೊಂಡಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದು, ಬುಧವಾರ ಸಿಕ್ಕಿಬಿದ್ದಿದ್ದಾನೆ. ರೆಗೆಲ್ ಮಹಕಲ್ ಕೇಶ್ವಾನಿಗೆ ಡ್ರಗ್ಸ್ ಪೂರೈಸುತ್ತಿದ್ದು, ನಂತರ ಅದನ್ನು ಕೈಜಾನ್ ಎಂಬ ವ್ಯಕ್ತಿಗೆ ಹಸ್ತಾಂತರಿಸುತ್ತಿದ್ದನು. ಕೈಜಾನ್ ಅದನ್ನು ನಟಿ ರಿಯಾ ಚಕ್ರವರ್ತಿ ಮತ್ತು ಸಹೋದರ ಶೌವಿಕ್ ‌ಗೆ ನೀಡುತ್ತಿದ್ದನು ಎಂಬ ಮಾಹಿತಿ ತಿಳಿದುಬಂದಿದೆ.

NCB Arrest Drug Peddler In Bollywood Drug Case

ಡ್ರಗ್ಸ್ ಪ್ರಕರಣದಲ್ಲಿ ನಟಿ ರಿಯಾ ಮತ್ತು ಸಹೋದರ ಶೌವಿಕ್ ಚಕ್ರವರ್ತಿ ಸೆಪ್ಟೆಂಬರ್‌ ತಿಂಗಳಲ್ಲಿ ಬಂಧಿತರಾಗಿದ್ದರು. ಇಬ್ಬರಿಗೂ ಬಾಂಬೆ ಹೈ ಕೋರ್ಟ್‌ ಜಾಮೀನು ನೀಡಿತ್ತು. ಜೂನ್ 14 ರಂದು ಮುಂಬೈನ ಫ್ಲ್ಯಾಟ್ ‌ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಡ್ರಗ್ಸ್ ಶಂಕೆಯೂ ವ್ಯಕ್ತವಾದ ಹಿನ್ನೆಲೆ ಪೊಲೀಸರು ಆ ಆಯಾಮದಲ್ಲಿ ತನಿಖೆಯನ್ನು ಆರಂಭಿಸಿದ್ದರು.

English summary
NCB Arrests Drug Peddler Regel Mahakal who supplies drugs to Rhea and Showik chakraborty
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X