• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking: ಬಾಲಿವುಡ್ ನಟ ಶಾರುಖ್​ ಖಾನ್, ಅನನ್ಯಾ ಪಾಂಡೆ ಮನೆ ಮೇಲೆ ಎನ್‌ಸಿಬಿ ದಾಳಿ

|
Google Oneindia Kannada News

ಮುಂಬೈ, ಅಕ್ಟೋಬರ್ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್​ ನಟ, ನಟಿಯರ ಮನೆಗಳ ಮೇಲೆ ಎನ್​ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್​ ನಟ ಶಾರುಖ್​ ಖಾನ್​ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್​ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್‌ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್​ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎನ್​ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್​ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

NCB Raids On Bollywood Actor Shah Rukh Khan And Ananya Pandeys House

ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್​ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್​ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್​ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್‌ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.

English summary
A team of narcotics control bureau (NCB) investigating officers in the Aryan Khan drug case have attacked the houses of Bollywood actor and actresses in Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X