ಪಾಕಿಸ್ತಾನದ ವಿರುದ್ಧ ಕೇಂದ್ರ ಸರಕಾರದಿಂದ ಸುಳ್ಳು ಅಪಪ್ರಚಾರ: ಶರದ್ ಪವಾರ್

ಮುಂಬೈ, ಸೆಪ್ಟೆಂಬರ್ 15: ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರದಂದು ಪಾಕಿಸ್ತಾನವನ್ನು ಹೊಗಳಿದ್ದಾರೆ. ಅಲ್ಲಿಗೆ ಹೋಗಿದ್ದಾಗ ಬೆಚ್ಚನೆಯ ಸ್ವಾಗತ ನೀಡಿದರು. ಭಾರತದಲ್ಲಿ ಸಾಮಾನ್ಯ ಅಭಿಪ್ರಾಯ ಏನಿದೆ, ಅದಕ್ಕೆ ವಿರುದ್ಧವಾಗಿ ಇಸ್ಲಾಮಿಕ್ ದೇಶ ಪಾಕಿಸ್ತಾನದಲ್ಲಿ ಜನರು ಸಂತೋಷವಾಗಿದ್ದಾರೆ ಎಂದು ಹೇಳಿದ್ದಾರೆ.

ರಾಜಕೀಯ ಲಾಭಕ್ಕಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರವು ಪಾಕಿಸ್ತಾನದ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದೆ ಎಂದು ಆರೋಪ ಮಾಡಿದ್ದಾರೆ. ಪಾಕಿಸ್ತಾನದ ಜನರಿಗೆ ಅನ್ಯಾಯ ಆಗುತ್ತಿದೆ ಮತ್ತು ಅಸಂತುಷ್ಟರಾಗಿದ್ದಾರೆ ಎಂದು ಇಲ್ಲಿನ ಜನ ಏನು ಹೇಳುತ್ತಾರೆ, ಅದು ನಿಜವಲ್ಲ. ಪಾಕಿಸ್ತಾನದ ವಾಸ್ತವ ಸ್ಥಿತಿ ಅರಿಯದೆ ರಾಜಕೀಯ ಲಾಭಕ್ಕಾಗಿ ಅಂಥ ಹೇಳಿಕೆಗಳನ್ನು ನೀಡುತ್ತಾರೆ ಎಂದು ಹೇಳಿದ್ದಾರೆ.

ಹಲವು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದೇನೆ. ಪಾಕಿಸ್ತಾನಿಯರು ಭಾರತದಲ್ಲಿ ಇರುವ ತಮ್ಮ ಸಂಬಂಧಿಕರನ್ನು ಭೇಟಿ ಆಗಲು ಸಾಧ್ಯವಿಲ್ಲದಿದ್ದರೂ ಭಾರತೀಯರನ್ನು ತಮ್ಮ ಸಂಬಂಧಿಕರು ಎಂದು ಭಾವಿಸುತ್ತಾರೆ ಎಂದಿದ್ದಾರೆ ಕೇಂದ್ರದ ಮಾಜಿ ಸಚಿವ ಶರದ್ ಪವಾರ್.

NCP Chief Sharad Pawar Praised Pakistan

ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆಯಿಂದ ನಡೆದ ದಾಳಿ ಹಾಗೂ ಈಚೆಗೆ ಕೇಂದ್ರ ಸರಕಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಮೇಲೆ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಸಂಬಂಧ ಹದಗೆಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+