ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ರಾಜಕೀಯ; 52 ಶಾಸಕರು ಎನ್‌ಸಿಪಿ ಜೊತೆ!

|
Google Oneindia Kannada News

ಮುಂಬೈ, ನವೆಂಬರ್ 25 : ಮಹಾರಾಷ್ಟ್ರದ ರಾಜಕೀಯ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎನ್‌ಸಿಪಿಯ 52 ಶಾಸಕರು ನಮ್ಮ ಜೊತೆ ಇದ್ದಾರೆ ಎಂದು ಪಕ್ಷದ ನಾಯಕ ನವಾಬ್ ಮಲ್ಲಿಕ್ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದೇವೇಂದ್ರ ಫಡ್ನವೀಸ್‌ಗೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಬೆಂಬಲ ನೀಡಿದ್ದಾರೆ. ಫಡ್ನವೀಸ್ ಮುಖ್ಯಮಂತ್ರಿಯಾಗಿ, ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸರ್ಕಾರಕ್ಕೆ ಬಹುಮತ ಸಾಬೀತು ಮಾಡುವ ಮ್ಯಾಜಿಕ್ ನಂಬರ್ ಇದೆಯೇ?.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಎತ್ತು ಏರಿಗೆ, ಕೋಣ ನೀರಿಗೆ! ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಎತ್ತು ಏರಿಗೆ, ಕೋಣ ನೀರಿಗೆ!

NCP Leader Nawab Malik Says 52 MLAs Come Back To Us

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕಾಂಗ್ರೆಸ್-ಎನ್‌ಸಿಪಿ-ಶಿವಸೇನೆ ಮೈತ್ರಿಕೂಟ ಸರ್ಕಾರ ರಚನೆ ಮಾಡಲು ತಮಗೆ ಶಾಸಕರ ಬೆಂಬಲವಿದೆ ಎಂದು ಹೇಳುತ್ತಿವೆ.

ಅಂದು ಕರ್ನಾಟಕ, ಇಂದು ಮಹಾರಾಷ್ಟ್ರ: ವಿಶ್ವಾಸ ಗೆಲ್ಲುತ್ತಾರಾ ಫಡ್ನವೀಸ್? ಅಂದು ಕರ್ನಾಟಕ, ಇಂದು ಮಹಾರಾಷ್ಟ್ರ: ವಿಶ್ವಾಸ ಗೆಲ್ಲುತ್ತಾರಾ ಫಡ್ನವೀಸ್?

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, "ಅಜಿತ್ ಪವಾರ್ ಹೊರತುಪಡಿಸಿ ಉಳಿದ ಎಲ್ಲಾ 53 ಶಾಸಕರು ನಮ್ಮ ಜೊತೆ ಇದ್ದಾರೆ" ಎಂದು ಹೇಳಿದ್ದಾರೆ. ಎನ್‌ಸಿಪಿ ನಾಯಕರು ಹೇಳಿಕೆಗಳು ಕುತೂಹಲಕ್ಕೆ ಕಾರಣವಾಗಿವೆ.

ಸುಪ್ರೀಂಕೋರ್ಟ್‌ನಲ್ಲಿ ಇಂದು ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಯಲಿದೆ. ಶಿವಸೇನೆ-ಕಾಂಗ್ರೆಸ್ ಮತ್ತು ಎನ್‌ಸಿಪಿ ಸರ್ಕಾರ ರಚನೆ ಮಾಡಲು ನಮ್ಮ ಬಳಿ ಅಗತ್ಯ ಸಂಖ್ಯಾಬಲವಿದೆ ಎಂದು ನ್ಯಾಯಾಲಯಕ್ಕೆ ಶಾಸಕರ ಬೆಂಬಲವಿರುವ ಪತ್ರ ಸಲ್ಲಿಸಲಿದೆ.

ಮಹಾರಾಷ್ಟ್ರ ಸರ್ಕಾರ ರಚನೆ: ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳುಮಹಾರಾಷ್ಟ್ರ ಸರ್ಕಾರ ರಚನೆ: ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ನವೆಂಬರ್ 30ರಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲು ರಾಜ್ಯಪಾಲರು ಸಮಯ ನೀಡಿದ್ದಾರೆ. ಆದರೆ, ಸುಪ್ರೀಂಕೋರ್ಟ್ ಇಂದು ತಕ್ಷಣ ಬಹುಮತ ಸಾಬೀತು ಮಾಡಿ ಎಂದು ಆದೇಶ ನೀಡಿದರೆ ರಾಜಕೀಯ ಚಿತ್ರಣ ಬೇರೆಯಾಗಲಿದೆ.

ಶಿವಸೇನೆ ಮತ್ತು ಕಾಂಗ್ರೆಸ್ ಶಾಸಕರು ವಿವಿಧ ಹೋಟೆಲ್‌ಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಶನಿವಾರ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬಿಜೆಪಿಯ ಬಳಿ 105 ಶಾಸಕರು ಇದ್ದಾರೆ. ಅಜಿತ್ ಪವಾರ್ ಬಳಿ ಎಷ್ಟು ಶಾಸಕರು ಇದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

English summary
Nationalist Congress Party (NCP) leader Nawab Malik said that 52 MLAs of the party have come back to us, one more is in touch with us.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X