ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ

|
Google Oneindia Kannada News

ಮುಂಬೈ, ನವೆಂಬರ್ 26: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಎನ್ ಸಿಪಿ ನಾಯಕ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

Ajit Pawar resigns as Maharashtra DCM of Maharashtra

ಶನಿವಾರ ಬೆಳಗ್ಗಿನ ಜಾವ ಅನಿರೀಕ್ಷಿತವಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಅಜಿತ್ ಪವಾರ್ ನಡೆಗ ತಮ್ಮ ಬೆಂಬವಿಲ್ಲ ಎಂದು ಸ್ಪಷ್ಟಪಡಿಸಿದ್ದ ಎನ್ ಸಿಪಿ ನಾಯಕ ಶರದ್ ಪವಾರ್ ಮತ್ತು ಕಾಂಗ್ರೆಸ್, ಶಿವಸೇನೆ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ನವೆಂಬರ್ 27 ರ ಸಂಜೆ 5 ಗಂಟೆಗೆ ಬಹುಮತ ಸಾಬೀತುಪಡಿಸುವಂತೆ ಸುಪ್ರೀ ಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಗಡುವು ನೀಡಿದ್ದು, ಇದನ್ನೂ ಮುನ್ನವೇ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ.

ಆದರೆ ಪವಾರ್ ರಾಜೀನಾಮೆ ವದಂತಿಯನ್ನು ಅವರ ಪುತ್ರ ತಳ್ಳಿಹಾಕಿದ್ದಾರೆ.

ಕಳೆದ ಅಕ್ಟೋಬರ್ 21 ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಅಕ್ಟೋಬರ್ 24 ರಂದು ಹೊರಬಿದ್ದಿದ್ದು, ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳಲ್ಲಿ ಜಯಗಳಿಸಿವೆ. ಬಹುಮತಕ್ಕೆ ಬೇಕಿದ್ದ ಮ್ಯಾಜಿಕ್ ನಂಬರ್ 145. ನಾಳೆ ಬಿಜೆಪಿ ಬಹುಮತ ಸಾಬೀತುಪಡಿಸಲು ವಿಫಲವಾದರೆ ಎನ್ ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ.

English summary
Ajit Pawar resigns as Maharashtra DCM of Maharashtra, Maharashtra political development
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X