ಮಹಾರಾಷ್ಟ್ರದಲ್ಲಿ "ಮಹಾಯುತಿ" ಸರ್ಕಾರ ಸಾಧ್ಯತೆ ಎಂದ ಅಠವಳೆ

ಮುಂಬೈ, ಜೂನ್ 12: ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಸೂತ್ರದ ಆಧಾರದ ಮೇಲೆ ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮತ್ತು ಇತರ ಪಕ್ಷಗಳ "ಮಹಾಯುತಿ" (ಮಹಾ ಮೈತ್ರಿ) ಸರ್ಕಾರ ರಚನೆಯಾಗಬಹುದು ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿದ್ದಾರೆ.

"ಈ ವಿಷಯದ ಸಂಬಂಧ ಬಿಜೆಪಿ ನಾಯಕ ದೇವೇಂದ್ರ್ ಘಡ್ನವಿಸ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೂಡ ಮಾತನಾಡುತ್ತೇನೆ" ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಅಠವಳೆ ಹೇಳಿದ್ದಾರೆ.

New Government Can Be Formed In Maharashtra Says Ramdas Athawale

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈಚೆಗೆ ದೆಹಲಿಯಲ್ಲಿ ಪ್ರಧಾನಿ ಅವರನ್ನು ಭೇಟಿ ಮಾಡಿ ಸಭೆ ನಡೆಸಿದ್ದರು. ಈ ಬೆನ್ನಲ್ಲೇ "ಮೋದಿ ಈ ದೇಶದ ಹಾಗೂ ಬಿಜೆಪಿಯ ಉನ್ನತ ನಾಯಕ" ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಕೂಡ ಮೋದಿಯನ್ನು ಹೊಗಳಿದ್ದರು.

ಈ ಸಂಗತಿಗಳನ್ನು ಉಲ್ಲೇಖಿಸಿರುವ ಅಠವಳೆ, ಮಹಾಯುತಿ ರಚನೆ ಹೇಳಿಕೆ ನೀಡಿದ್ದಾರೆ. ಶಿವಸೇನೆ- ಬಿಜೆಪಿ ಮೈತ್ರಿಗೆ ಇದು ಸೂಕ್ತ ಸಮಯ ಎಂದು ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿ ಬಿಜೆಪಿ ಹಾಗೂ ಶಿವಸೇನೆ ಮೈತ್ರಿ ಕಳೆದುಕೊಂಡಿದ್ದವು. ನಂತರ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಮಹಾಘಟಬಂಧನ ಸರ್ಕಾರ ಅಸ್ವಿತ್ವಕ್ಕೆ ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+