• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಪ್ಪಳಿಸಿದ 'ನಿಸರ್ಗ' ಚಂಡಮಾರುತ ; ಮುಂಬೈ ವಿಮಾನ ನಿಲ್ದಾಣ ಬಂದ್

|

ಮುಂಬೈ, ಜೂನ್ 03 : 'ನಿಸರ್ಗ' ಚಂಡಮಾರುತ ಮಹಾರಾಷ್ಟ್ರಕ್ಕೆ ಅಪ್ಪಳಿಸಿದೆ. ಮುಂಜಾಗ್ರತಾ ಕ್ರಮವಾಗಿ ಮುಂಬೈ ವಿಮಾನ ನಿಲ್ದಾಣದಿಂದ ಸಂಜೆಯ ತನಕ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ನಿಸರ್ಗ' ಚಂಡಮಾರುತ ಬುಧವಾರ ಮಧ್ಯಾಹ್ನದ ವೇಳೆಗೆ ಅಲಿಬಾಗ್ ಪ್ರದೇಶಕ್ಕೆ ಅಪ್ಪಳಿಸಲಿದೆ. ಇದರಿಂದಾಗಿ ಮುಂಬೈ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಗಾಳಿ ಬೀಸುತ್ತಿದ್ದು, ಮಳೆಯಾಗುತ್ತಿದೆ.

ಮುಂಬೈಗೆ ಹೋಗುವ ಮುನ್ನ ಓದಿ; ಸರ್ಕಾರದಿಂದ ಹೊಸ ಮಾರ್ಗಸೂಚಿ

ಚಂಡಮಾರುತ ಅಪ್ಪಳಿಸಿದ ಪರಿಣಾಮ ಮುಂಬೈ ವಿಮಾನ ನಿಲ್ದಾಣದಿಂದ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸಂಜೆ 7 ಗಂಟೆ ಬಳಿಕ ವಿಮಾನ ಹಾರಾಟವನ್ನು ಪುನಃ ಆರಂಭಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

'ನಿಸರ್ಗ' ಚಂಡಮಾರುತ; ಮುಂಬೈನಲ್ಲಿ 40 ಸಾವಿರ ಜನರ ಸ್ಥಳಾಂತರ

ಕೊರೊನಾ ವೈರಸ್ ಸೋಂಕು ಹರಡದಂತೆ ಲಾಕ್‌ ಡೌನ್ ಘೋಷಣೆ ಮಾಡಿದ ಬಳಿಕ ವಿಮಾನ ಹಾರಾಟ ಸಂಪೂರ್ಣ ಸ್ಥಗಿತಗೊಂಡಿತ್ತು. ಮೇ 25ರಿಂದ ದೇಶಿಯ ವಿಮಾನಗಳ ಸಂಚಾರ ಮಾತ್ರ ಆರಂಭವಾಗಿದೆ.

ನಿಸರ್ಗ ಚಂಡಮಾರುತ: ಮುಂಬೈನಲ್ಲಿ 19 ವಿಮಾನಗಳು ಮಾತ್ರ ಹಾರಾಟ

ಮುಂಬೈನಲ್ಲಿ ಚಂಡಮಾರುತದ ಪ್ರಭಾವ ಎದುರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನದಿಂದಲೇ ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಗಾಳಿ ಜೋರಾಗಿ ಬೀಸುತ್ತಿದೆ. ನಗರದ ಸಮುದ್ರ ತೀರ, ಕಳೆ ಪ್ರದೇಶದಲ್ಲಿದ್ದ 40 ಸಾವಿರ ಜನರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ.

English summary
After the land fall of Nisarga cyclone flight operations have been stopped at Mumbai airport. Flight service may start after 7 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X