ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈಗೆ ಅಪ್ಪಳಿಸಲಿದೆ 'ನಿಸರ್ಗ'; ಕರ್ನಾಟಕದಲ್ಲೂ ಮಳೆ

|
Google Oneindia Kannada News

ಮುಂಬೈ, ಜೂನ್ 03 : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ನಿಸರ್ಗ' ಚಂಡಮಾರುತ ಮಹಾರಾಷ್ಟ್ರಕ್ಕೆ ಇಂದು ಅಪ್ಪಳಿಸಲಿದೆ. ಗುಜರಾತ್ ಮತ್ತು ಕರ್ನಾಟಕದಲ್ಲಿಯೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

Recommended Video

ಏಕದಿನದಲ್ಲಿ ವೇಗದ 10,000 ರನ್ ದಾಖಲೆ ಬರೆದ ಟಾಪ್ 5 ಬ್ಯಾಟ್ಸ್‌ಮನ್‌ಗಳು | virat kohli | Oneindia Kannada

ಮುಂಬೈನಿಂದ 94 ಕಿ. ಮೀ. ದೂರದಲ್ಲಿರುವ ಅಲಿಬಾಗ್‌ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ. ಮಹಾರಾಷ್ಟ್ರ ಮತ್ತು ಗುಜರಾತ್‌ನ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

 ನಿಸರ್ಗ ಚಂಡಮಾರುತ: ಮಹಾರಾಷ್ಟ್ರದಲ್ಲಿ 15 ಎನ್‌ಡಿಆರ್‌ಎಫ್ ತಂಡಗಳ ನಿಯೋಜನೆ ನಿಸರ್ಗ ಚಂಡಮಾರುತ: ಮಹಾರಾಷ್ಟ್ರದಲ್ಲಿ 15 ಎನ್‌ಡಿಆರ್‌ಎಫ್ ತಂಡಗಳ ನಿಯೋಜನೆ

ಮುಂಬೈ, ಪಾಲ್ಘರ್, ರಾಯಗಢ, ಥಾಣೆ, ರತ್ನಗಿರಿ, ಸಿಂಧುದುರ್ಗ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 110 ರಿಂದ 120 ಕಿ. ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ನಿಸರ್ಗ ಚಂಡಮಾರುತ: ಮಹಾರಾಷ್ಟ್ರ, ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ನಿಸರ್ಗ ಚಂಡಮಾರುತ: ಮಹಾರಾಷ್ಟ್ರ, ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

ಗುಜರಾತ್, ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. 100 ಕಿ. ಮೀ.ಗಿಂತಲೂ ಅಧಿಕ ವೇಗದಲ್ಲಿ ಗಾಳಿ ಬೀಸಲಿದ್ದು, ಜೂನ್ 4ರ ತನಕ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ಕೊಡಲಾಗಿದೆ.

ಕೇರಳದಲ್ಲಿ ಭಾರೀ ಮಳೆ : 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ಕೇರಳದಲ್ಲಿ ಭಾರೀ ಮಳೆ : 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ದಿಕ್ಕು ಬದಲಿಸಿದ 'ನಿಸರ್ಗ'

ದಿಕ್ಕು ಬದಲಿಸಿದ 'ನಿಸರ್ಗ'

ಮಂಗಳವಾರ ಮಧ್ಯಾಹ್ನ ಮುಂಬೈನಿಂದ ದಕ್ಷಿಣಕ್ಕೆ 430 ಕಿ. ಮೀ. ದೂರದಲ್ಲಿ ಚಂಡಮಾರುತದ ಕೇಂದ್ರ ಬಿಂದುವಿತ್ತು. ಆದ್ದರಿಂದ ನೇರವಾಗಿ ಮುಂಬೈಗೆ ಅಪ್ಪಳಿಸಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಚಂಡಮಾರುತ ದಿಕ್ಕು ಬದಲಿಸಿದ್ದು, ಅಲಿಭಾಗ್ ಪ್ರದೇಶಕ್ಕೆ ಅಪ್ಪಳಿಸಲಿದೆ.

ಯಾವ-ಯಾವ ರಾಜ್ಯದಲ್ಲಿ ಮಳೆ

ಯಾವ-ಯಾವ ರಾಜ್ಯದಲ್ಲಿ ಮಳೆ

'ನಿಸರ್ಗ' ಚಂಡಮಾರುತ ಉತ್ತರ ಮಹಾರಾಷ್ಟ್ರ, ಆಗ್ನೇಯ ಗುಜರಾತ್ ಮಧ್ಯಭಾಗದಲ್ಲಿ ಹಾದು ಹೋಗಲಿದೆ. ಕರ್ನಾಟಕ ಮತ್ತು ಗೋವಾ ರಾಜ್ಯಗಳಲ್ಲಿಯೂ ಚಂಡಮಾರುತದ ಪರಿಣಾಮ ಕರಾವಳಿ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

30 ಎನ್‌ಡಿಆರ್‌ಎಫ್ ತಂಡ ರವಾನೆ

30 ಎನ್‌ಡಿಆರ್‌ಎಫ್ ತಂಡ ರವಾನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. 30 ಎನ್‌ಡಿಆರ್‌ಎಫ್ ತಂಡಗಳನ್ನು ಎರಡೂ ರಾಜ್ಯಗಳಿಗೆ ಕಳುಹಿಸಿಕೊಡಲಾಗಿದೆ. ಮುಂಬೈನ ತಗ್ಗು ಪ್ರದೇಶ ಮತ್ತು ಕೊಳಗೇರಿಯ ಜನರನ್ನು ಸ್ಥಳಾಂತರ ಮಾಡಲಾಗಿದೆ. ಸೇನೆಗೂ ಸನ್ನದ್ಧವಾಗಿ ಇರುವಂತೆ ಸೂಚನೆ ಕೊಡಲಾಗಿದೆ.

ಕರ್ನಾಟಕದ ಮೇಲೆ ಪ್ರಭಾವ

ಕರ್ನಾಟಕದ ಮೇಲೆ ಪ್ರಭಾವ

'ನಿಸರ್ಗ' ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆಯ ಮುನ್ಸೂಚನೆ ಕೊಡಲಾಗಿದೆ.

English summary
Cyclone Nisarga is set to make landfall at Alibaug in Maharashtra around 45 Km from Mumbai. High alert announced in Karnataka, Goa and Gujarat Karavali.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X