ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಇನ್ನೂ ಬಗೆಹರಿಯದ ಶಿವಸೇನಾ ಚುನಾವಣಾ ಚಿಹ್ನೆ ವಿವಾದ

|
Google Oneindia Kannada News

ಮುಂಬೈ , ಆಗಸ್ಟ್ 23: ಶಿವಸೇನೆ ಪಕ್ಷದ ಚಿಹ್ನೆ ಕಿತ್ತಾಟಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ಶಿವಸೇನೆ ಪಕ್ಷದ ಮೇಲೆ ಹಕ್ಕು ಸಾಧಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ನಡುವಿನ ಕದನದ ಕುರಿತು ಸಾಂವಿಧಾನಿಕ ಪೀಠಕ್ಕೆ ಸುಪ್ರೀಂ ಕೋರ್ಟ್ ಎಂಟು ಪ್ರಶ್ನೆಗಳನ್ನು ರೂಪಿಸಿದೆ. ಐವರು ಸದಸ್ಯರ ಸಂವಿಧಾನ ಪೀಠ ಗುರುವಾರ ಅರ್ಜಿಯ ವಿಚಾರಣೆ ನಡೆಸಲಿದೆ.

ಸುಪ್ರೀಂನಲ್ಲಿ ಶಿವಸೇನೆಯ ಶಿಂಧೆ ಬಣಕ್ಕೆ ಹಿನ್ನಡೆಸುಪ್ರೀಂನಲ್ಲಿ ಶಿವಸೇನೆಯ ಶಿಂಧೆ ಬಣಕ್ಕೆ ಹಿನ್ನಡೆ

ಜೊತೆಗೆ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಅವರ ಬಣಗಳ ನಡುವಿನ ಪಕ್ಷದ ಚಿಹ್ನೆ ವಿವಾದದ ಕುರಿತು ಗುರುವಾರದವರೆಗೆ ಕ್ರಮ ಕೈಗೊಳ್ಳದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

No Action Till Thursday, SC Order On Shiv Sena Symbol Controversy

'ನಿಜವಾದ ಶಿವಸೇನೆ' ಪಕ್ಷವೆಂದು ಗುರುತಿಸಿ ಅದಕ್ಕೆ 'ಬಿಲ್ಲು-ಬಾಣ' ಚಿಹ್ನೆಯನ್ನು ನೀಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಸಲ್ಲಿಸಿರುವ ಅರ್ಜಿಯ ಕುರಿತು ಗುರುವಾರದವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಗುರುವಾರ ಸಾಂವಿಧಾನಿಕ ಪೀಠದ ಮುಂದೆ ವಿಷಯವನ್ನು ಪಟ್ಟಿ ಮಾಡಲಾಗುತ್ತದೆ. ಚುನಾವಣಾ ಆಯೋಗದ ಪ್ರಕ್ರಿಯೆಗೆ ಸಂಬಂಧಿಸಿದ ಚಿಹ್ನೆಯ ಬಗ್ಗೆ ಪೀಠವು ನಿರ್ಧರಿಸುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಹೇಳಿದೆ.

ಶಾಸಕರ ಅನರ್ಹತೆ ಮತ್ತು ಇತರ ತಾಂತ್ರಿಕ ಸಮಸ್ಯೆಗಳ ಕುರಿತು ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

No Action Till Thursday, SC Order On Shiv Sena Symbol Controversy

ಉದ್ಧವ್ ಠಾಕ್ರೆ ಅವರ ಬಣದ ಎಲ್ಲಾ ಮನವಿಗಳನ್ನು ವಜಾಗೊಳಿಸುವಂತೆ ಮತ್ತು ನಿಜವಾದ ಶಿವಸೇನೆ ಯಾರ ಬಣ ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸಲಿ ಎಂದು ಶಿವವಸೇನೆಯ ಬಂಢಾಯ ನಾಯಕ ಏಕನಾಥ್ ಶಿಂಧೆ ಅವರು ಕಳೆದ ತಿಂಗಳ ಕೊನೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.

ಏಕನಾಥ್ ಶಿಂಧೆ ಮತ್ತು ಶಿವಸೇನೆಯ 55 ಶಾಸಕರ ಪೈಕಿ 39 ಶಾಸಕರ ಬಂಡಾಯವು ಜೂನ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಪತನಕ್ಕೆ ಕಾರಣವಾಯಿತು.

ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನದ ನಂತರ, ಏಕನಾಥ್ ಶಿಂಧೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಹೊಸ ಸರ್ಕಾರದಲ್ಲಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿದ್ದಾರೆ.

'ಬಿಲ್ಲು ಮತ್ತು ಬಾಣ'ದ ಚುನಾವಣಾ ಚಿಹ್ನೆ

ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಅಧಿಸೂಚನೆ ಹೊರಡಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಇತ್ತೀಚೆಗಷ್ಟೇ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ಶಿವಸೇನೆಯ ಚಿಹ್ನೆಯನ್ನು ಇಟ್ಟುಕೊಂಡು ಚುನಾವಣಾ ಅಖಾಡಕ್ಕೆ ಇಳಿಯಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಮುಂದಾಗಿದ್ದು, ಲೋಕಸಭೆ ಮತ್ತು ಮಹಾರಾಷ್ಟ್ರ ವಿಧಾನಸಭೆಯಲ್ಲಿ ತಮಗೆ ನೀಡಿದ ಮಾನ್ಯತೆಯನ್ನು ಉಲ್ಲೇಖಿಸಿ, ಪಕ್ಷದ 'ಬಿಲ್ಲು ಮತ್ತು ಬಾಣ'ದ ಚುನಾವಣಾ ಚಿಹ್ನೆಯನ್ನು ತಮಗೆ ನೀಡುವಂತೆ ಆಯೋಗಕ್ಕೆ ಪತ್ರ ಬರೆದಿತ್ತು.

ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿರುವ ಏಕನಾಥ್ ಶಿಂಧೆ ಸರ್ಕಾರವು ವಿಶ್ವಾಸಮತಯಾಚನೆಯಲ್ಲೂ ಪಾಸ್ ಆಗಿದೆ. ಜೂನ್ 4ರ ಸೋಮವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಶ್ವಾಸಮತಯಾಚನೆ ಪ್ರಕ್ರಿಯೆ ಆರಂಭಿಸಲಾಯಿತು. 23 ನಿಮಿಷಗಳಲ್ಲಿ ಶಿವಸೇನೆ ಮತ್ತು ಬಿಜೆಪಿ ನೇತೃತ್ವದ ಸರ್ಕಾರವು 164 ಮತಗಳ ಬೆಂಬಲದೊಂದಿಗೆ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿ ಆಯಿತು.

288 ಸದಸ್ಯ ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕರು ಮೃತಪಟ್ಟ ಹಿನ್ನೆಲೆ ಸದಸ್ಯರ ಬಲವನ್ನು 287ಕ್ಕೆ ಇಳಿಸಲಾಗಿತ್ತು. ಈ ಪೈಕಿ ಬಹುಮತಕ್ಕೆ 144 ಮತಗಳ ಅಗತ್ಯವಿದ್ದು, 164 ಶಾಸಕರು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಮಂಡಿಸಿದ ವಿಶ್ವಾಸಮತ ಯಾಚನೆಗೆ ಪರವಾಗಿ ಮತ ಚಲಾಯಿಸಿದರು. 99 ಶಾಸಕರು ವಿಶ್ವಾಸ ಮತಯಾಚನೆಗೆ ವಿರುದ್ಧವಾಗಿ ಮತ ಚಲಾಯಿಸಿದ್ದು, ಆ ಮೂಲಕ ಒಟ್ಟು 263 ಶಾಸಕರು ಮತ ಚಲಾಯಿಸಿದರು. ಮೂವರು ಶಾಸಕರು ಗೈರಾಗಿದ್ದು, ಬಹುತೇಕ ಕಾಂಗ್ರೆಸ್ ಮತ್ತು ಎನ್‌ಸಿಪಿಯ 20 ಶಾಸಕರು ಮತದಾನದ ವೇಳೆ ಗೈರು ಹಾಜರಾಗಿದ್ದರು.

English summary
Supreme Court orders Election Commission not to take any action till Thursday on Shiv Sena symbol controversy. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X