• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನನಗೆ ಭೂಗತ ಲೋಕದ ಸಂಪರ್ಕವಿದೆ ಎಂದು ಹೇಳುವ ಧೈರ್ಯ ಯಾರಿಗಿದೆ: ನವಾಬ್

|
Google Oneindia Kannada News

ಮುಂಬೈ ನವೆಂಬರ್ 2: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, ನನಗೆ ಭೂಗತ ಲೋಕದ ಸಂಪರ್ಕವಿದೆ ಎಂದು ಬೆರಳು ತೋರಿಸಿ ಹೇಳುವ ಧೈರ್ಯ ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನವಾಬ್ ಮಲಿಕ್, "ನವಾಬ್ ಮಲಿಕ್ ಭೂಗತ ಲೋಕದ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗಿದೆ. ನಾನು ನನ್ನ ಜೀವನದ 62 ವರ್ಷಗಳನ್ನು ಇದೇ ನಗರದಲ್ಲಿ ಕಳೆದಿದ್ದೇನೆ. ನನಗೆ ಭೂಗತ ಜಗತ್ತಿನ ಸಂಪರ್ಕವಿದೆ ಎಂದು ಬೆರಳು ತೋರಿಸಿ ಹೇಳುವ ಧೈರ್ಯ ಯಾರಿಗೂ ಇಲ್ಲ" ಎಂದು ಹೇಳಿದರು.

ಮುಂಬೈ ಡ್ರಗ್ಸ್​ ಕೇಸ್​​ಗೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಎನ್​ಸಿಪಿ ಸಚಿವ ನವಾಬ್​ ಮಲಿಕ್​ ಇಂದು ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೆಸರನ್ನು ಎಳೆದುತಂದಿದ್ದಾರೆ. ಮಾದಕ ದ್ರವ್ಯ ಸಾಗಣೆ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ಡ್ರಗ್​ ಪೆಡ್ಲರ್​ ಜೈದೀಪ್​ ರಾಣಾ ಅವರೊಂದಿಗೆ ದೇವೇಂದ್ರ ಫಡ್ನವೀಸ್​ ಮತ್ತು ಅವರ ಪತ್ನಿ ಅಮೃತಾ ಫಡ್ನವೀಸ್​ ನಿಂತಿರುವ ಒಂದೆರಡು ಫೋಟೋಗಳನ್ನು ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದು ಇದೀಗ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಆದರೆ ಅದರ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್​​ ನವಾಬ್​​ ಮಲಿಕ್​ಗೆ ತಿರುಗೇಟು ನೀಡಿದ್ದು, ನವಾಬ್​ ಮಲಿಕ್​​ಗೂ, ಭೂಗತ ಜಗತ್ತಿಗೂ ಇರುವ ಸಂಪರ್ಕವನ್ನು ದೀಪಾವಳಿ ನಂತರ ನಾವು ಬಹಿರಂಗಪಡಿಸುತ್ತೇವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಫಡ್ನವೀಸ್‌ಗೆ ನವಾಬ್ ಮಲಿಕ್ ಖಡಕ್ ತಿರುಗೇಟು ಕೊಟ್ಟಿದ್ದಾರೆ.

"ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು ಮತ್ತು ಗೃಹ ಖಾತೆಯನ್ನು ಹೊಂದಿದ್ದರು. ನನಗೆ ಭೂಗತ ಜಗತ್ತಿನೊಂದಿಗೆ ಸಂಪರ್ಕವಿದೆ ಎಂದು ಅವರು ಭಾವಿಸಿದರೆ ಅವರು ತನಿಖೆ ನಡೆಸಬಹುದಿತ್ತು" ಎಂದು ನವಾಬ್ ಮಲಿಕ್ ಹೇಳಿದ್ದಾರೆ. ಎನ್‌ಸಿಪಿ ನಾಯಕನ ಭೂಗತ ಜಗತ್ತಿನ ಸಂಪರ್ಕಗಳ ಬಗ್ಗೆ ಬಹಿರಂಗಪಡಿಸುವ ಮೂಲಕ ದೀಪಾವಳಿ ನಂತರ ಬಾಂಬ್ ಸ್ಫೋಟಿಸುವುದಾಗಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ನವಾಬ್​ ಮಲಿಕ್​ ಅನಗತ್ಯವಾಗಿ ಡ್ರಗ್ಸ್​ ಕೇಸ್​​ನಲ್ಲಿ ನನ್ನ ಮತ್ತು ಪತ್ನಿ ಅಮೃತಾಳ ಹೆಸರನ್ನು ಎಳೆದುತಂದಿದ್ದಾರೆ. ಇದು ಆಧಾರ ರಹಿತವಾದ ಆರೋಪ. ಆದರೇನು ಈಗ ನವಾಬ್​ ಮಲಿಕ್​ ಆಟ ಶುರು ಮಾಡಿದ್ದಾರೆ. ಪಟಾಕಿ ಹಚ್ಚಿದ್ದಾರೆ. ಇದಕ್ಕೊಂದು ಲಾಜಿಕಲ್​ ಅಂತ್ಯವನ್ನು ನಾನು ಕೊಡುತ್ತೇನೆ. ದೀಪಾವಳಿಯ ನಂತರ ನಾನು ಬಾಂಬ್​ ಸ್ಫೋಟಿಸುತ್ತೇನೆ ಎಂದು ಹೇಳಿದ್ದಾರೆ. ಮುಂಬೈ ಭೂಗತ ಜಗತ್ತಿಗೂ, ನವಾಬ್​ ಮಲಿಕ್​ಗೂ ಇರುವ ಸಂಪರ್ಕವನ್ನು ನಾನು ಸಾರ್ವಜನಿಕರ ಎದುರು, ದಾಖಲೆ ಸಮೇತ ಪ್ರಸ್ತುತ ಪಡಿಸುತ್ತೇನೆ ಎಂದು ಹೇಳಿದ್ದಾರೆ.

ಈ ಜೈದೀಪ್​ ರಾಣಾನೊಂದಿಗೆ ಫೋಟೋ ತೆಗೆಸಿಕೊಂಡಾಕ್ಷಣ ಅವನೊಂದಿಗೆ ಸಂಬಂಧ ಇದೆ ಎಂದು ಭಾವಿಸಬೇಕಾಗಿಲ್ಲ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ನದಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ತಂಡವೊಂದು ನಮ್ಮನ್ನು ಭೇಟಿಯಾಗಿತ್ತು. ಆಗ ತೆಗೆಸಿಕೊಂಡ ಫೋಟೋ ಇದಾಗಿದೆ ಎಂದಿದ್ದಾರೆ. ಆ ತಂಡದೊಂದಿಗೆ ಇರುವವರೆಲ್ಲರೊಂದಿಗೂ ಫೋಟೋ ಇದೆ. ಆದರೆ ಈ ಫೋಟೋವನ್ನಷ್ಟೇ ಹಾಕುವ ಮೂಲಕ ನವಾಬ್​ ಮಲಿಕ್​ ಬೇರೇನೋ ಹೇಳಲು ಹೊರಟಿದ್ದಾರೆ ಎಂದು ಫಡ್ನವೀಸ್ ​ ಹೇಳಿದ್ದಾರೆ. ಮುಂಬೈ ಡ್ರಗ್​ ಕೇಸ್​ಗೆ ಸಂಬಂಧಪಟ್ಟಂತೆ ನವಾಬ್​ ಮಲಿಕ್,​ ಫಡ್ನವೀಸ್​ ವಿರುದ್ಧ ಆರೋಪ ಮಾಡಿದ್ದಲ್ಲದೆ, ಅವರ ಆಡಳಿತ ಅವಧಿಯಲ್ಲೇ ಅಂದರೆ, 2014-2018ರ ಅವಧಿಯಲ್ಲೇ ಮುಂಬೈನಲ್ಲಿ ಮಾದಕ ದ್ರವ್ಯದ ಪ್ರಮಾಣ ಹೆಚ್ಚಾಗಿದೆ ಎಂದೂ ಪ್ರತಿಪಾದಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನವಾಬ್ ಖಡಕ್ ದೇವೇಂದ್ರ ಫಡ್ನವೀಸ್‌ಗೆ ಖಡಕ್ ತಿರುಗೇಟು ಕೊಟ್ಟಿದ್ದಾರೆ.

English summary
Maharashtra minister Nawab Malik launched a scathing attack on former chief minister Devendra Fadnavis on Tuesday, saying nobody had the guts to point fingers and claim he had underworld links.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X