ಓರ್ವ ಕೊರೊನಾ ಸೋಂಕಿತನಿಂದ 400 ಮಂದಿಗೆ ಸೋಂಕು ತಗುಲಬಹುದು
ಮುಂಬೈ, ಏಪ್ರಿಲ್ 2: ಓರ್ವ ಕೊರೊನಾ ಸೋಂಕಿತ 400 ಮಂದಿಗೆ ಸೋಂಕು ಹರಡಬಲ್ಲ ಎಂಬ ಮಾಹಿತಿಯನ್ನು ಮಹಾರಾಷ್ಟ್ರ ಆರೋಗ್ಯ ತಜ್ಞರು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಾಮಾನ್ಯ ಶೀತ, ಸಣ್ಣ ಪ್ರಮಾಣದ ಮೈಕೈ ನೋವು, ಹಾಗೂ ಆಯಾಸಗಳು ಕೋವಿಡ್-19 ರೋಗಿಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹೊಸ ರೋಗ ಲಕ್ಷಣವಾಗಿದೆ ಎಂದು ಕೋವಿಡ್ ಟಾಸ್ಕ್‌ಫೋರ್ಸ್‌ನ ಡಾ. ಸಂಜಯ್ ಓಕ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ವಚ್ಛತೆ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಬಿಟ್ಟರೆ ಬೇರೆ ಮಾರ್ಗಗಳಿಲ್ಲ ಎಂದು ಓಕ್ ಅಭಿಪ್ರಾಯಪಟ್ಟಿದ್ದಾರೆ.
ಕೊರೊನಾ ಸಾಮಾನ್ಯವಾಗಿ ಮೂಗಿನ ಮೂಲಕ ಹರಡುತ್ತದೆ. ಓರ್ವ ಕೊರೊನಾ ಸೋಂಕಿತ ಕನಿಷ್ಟ 400 ಮಂದಿಗೆ ಸೋಂಕನ್ನು ಹರಡಬಲ್ಲ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದಷ್ಟೇ ಇದಕ್ಕೆ ಇರುವ ಪರಿಹಾರ ಎನ್ನುತ್ತಾರೆ ಓಕ್
ಹೌಹಾರಿಸುತ್ತೆ ಅಂಕಿ-ಸಂಖ್ಯೆ: ಮುಂಬೈನಲ್ಲಿ ಶೇ.475ರಷ್ಟು ಕೊರೊನಾ ಏರಿಕೆ!
ರಾಜ್ಯದಲ್ಲಿ ಒಂದೇ ದಿನದಲ್ಲಿ 39544 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 227 ಜನರು ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 54,649ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 28,12,980ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 23,600 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 24,00,727ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 3,56,243 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.