ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮಹಾ' ಸುದ್ದಿ: ಸರ್ಕಾರಿ ನೌಕರರಿಗೆ ವಾರದಲ್ಲಿ ಐದೇ ದಿನ ಕೆಲಸ!

|
Google Oneindia Kannada News

ನವದೆಹಲಿ, ಫೆಬ್ರವರಿ.12: ಸರ್ಕಾರಿ ನೌಕರರಿಗೆ ಮಹಾರಾಷ್ಟ್ರ ಸರ್ಕಾರವು ಬಂಪರ್ ಕೊಡುಗೆಯನ್ನು ನೀಡಿದೆ. ವಾರದಲ್ಲಿ ಐದು ದಿನ ಮಾತ್ರ ಕೆಲಸಕ್ಕೆ ಹಾಜರಾಗುವಂತಾ ಹೊಸ ಕಾನೂನನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಮುಂದಾಗಿದೆ.

ಮುಂಬೈನಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಈ ವೇಳೆ ಸರ್ಕಾರಿ ನೌಕರರ ಮುಖದಲ್ಲಿ ಮಂದಹಾಸ ಮೂಡಿಸುವಂತಾ ತೀರ್ಮಾನವನ್ನು ಮಹಾರಾಷ್ಟ್ರ ಸರ್ಕಾರ ತೆಗೆದುಕೊಂಡಿದೆ.

ಒಬ್ಬರಲ್ಲ.. ಇಬ್ಬರಲ್ಲ.. 300 ಮಹಿಳೆಯರ ವಿರುದ್ಧ ಕೇಸ್ ಜಡಿದ ಪೊಲೀಸರು!ಒಬ್ಬರಲ್ಲ.. ಇಬ್ಬರಲ್ಲ.. 300 ಮಹಿಳೆಯರ ವಿರುದ್ಧ ಕೇಸ್ ಜಡಿದ ಪೊಲೀಸರು!

ವಾರದಲ್ಲಿ ಐದು ವರ್ಕಿಂಗ್ ಡೇ ಎಂದು ಘೋಷಿಸಿರುವ ಸರ್ಕಾರವು, ಸೋಮವಾರದಿಂದ ಶುಕ್ರವಾರವರೆಗೂ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಫೆಬ್ರವರಿ.29ರ ಮರುದಿನವೇ ಎಂದರೆ ಮಾರ್ಚ್.01ರಿಂದ ಈ ಹೊಸ ಕಾನೂನು ಮಹಾರಾಷ್ಟ್ರದಲ್ಲಿ ಜಾರಿಗೆ ಬರಲಿದೆ.

Only Five Working Day In Maharashtra For Government Employees

ಮಹಾರಾಷ್ಟ್ರದಲ್ಲಿ ಸುಮಾರ 20 ಲಕ್ಷಕ್ಕೂ ಅಧಿಕ ಮಂದಿ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಎಲ್ಲ ನೌಕರರಿಗೂ ಸರ್ಕಾರವು ಜಾರಿಗೊಳಿಸಿದ ಹೊಸ ಕಾನೂನು ಅನ್ವಯವಾಗಲಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿ ಓಬಿಸಿ ಮತ್ತು ಸಾಮಾಜಿಕ ಶೈಕ್ಷಣಿಕವಾಗಿ ಹಿಂದುಳಿದ ಜಾತಿಗಳು, ವಿಶೇಷವಾಗಿ ಹಿಂದುಳಿದ ಜಾತಿಗಳಿಗೆ ಸಂಬಂಧಿಸಿದಂತೆ ಬಹುಜನ ಕಲ್ಯಾಣ ಇಲಾಖೆ ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

English summary
Only Five Working Day In Maharashtra For Government Employees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X