• search
 • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆ, 22 ಕೋವಿಡ್ ರೋಗಿಗಳ ಸಾವು

|

ನಾಸಿಕ್, ಏಪ್ರಿಲ್ 21: ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾದ ಕಾರಣ 22 ಕೋವಿಡ್ ಸೋಂಕಿತರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ.

ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಬುಧವಾರ ಘಟನೆ ವರದಿಯಾಗಿದೆ. ಸಿಬ್ಬಂದಿ ಎಷ್ಟೇ ಪ್ರಯತ್ನ ಪಟ್ಟರೂ ಸಿಲಿಂಡರ್ ಸೋರಿಕೆ ನಿಲ್ಲುತ್ತಿಲ್ಲ.

ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್‌ಗಳ ಕಳವು ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್‌ಗಳ ಕಳವು

ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚಿದ್ದು, ಆಕ್ಸಿಜನ್ ಸಿಲಿಂಡರ್ ಕೊರತೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಆತಂಕ ಹೆಚ್ಚಾಗಿಸಿದೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 58,954 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 52,412 ಮಂದಿ ಗುಣಮುಖರಾಗಿದ್ದಾರೆ. 351 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38,98,232 ಪ್ರಕರಣಗಳಿವೆ.

ಒಂದೇ ಒಂದು ದಿನದಲ್ಲಿ 295041 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 2,023 ಜನರು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದರೆ, 1,67,457 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಈವರೆಗೂ 1,32,76,039 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ.

ಇದರ ಹೊರತಾಗಿ ದೇಶದಲ್ಲಿ 21,57,538 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

   'ಕೊರೊನಾ ಚೈನ್‌‌ ಲಿಂಕ್‌ ಕಟ್‌ ಮಾಡಲು 14 ದಿನಗಳ ಕಠಿಣ ಕ್ರಮ ಅಗತ್ಯ'- ಆರೋಗ್ಯ ಸಚಿವ ಕೆ.ಸುಧಾಕರ್‌ | Oneindia
   English summary
   An Oxygen tanker leaked while tankers were being filled at Dr Zakir Hussain hospitalin Maharashtra's Nashik districts on Wednesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X