ಸಾಧುಗಳ ಹತ್ಯೆ: ಬಂಧಿತ 115 ಮಂದಿ ಪೈಕಿ ಓರ್ವನಿಗೆ ಕೊರೊನಾ ಸೋಂಕು

ಪಾಲ್ಘರ್, ಮೇ 1: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಇಬ್ಬರು ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 115 ಮಂದಿ ಪೈಕಿ ಓರ್ವನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Recommended Video

      ತಬ್ಲಿಘಿ ಜಮಾತ್ ನಲ್ಲಿ ಸಿಲುಕಿ ಚೇತರಿಸಿಕೊಂಡ ವ್ಯಕ್ತಿ ಎರಡನೇ ಬಾರಿ ಪ್ಲಾಸ್ಮಾ ದಾನ ಮಾಡಿದರು | Plasma Therapy

      ಪ್ರಸ್ತುತ ಸೋಂಕು ಪತ್ತೆಯಾಗಿರುವ ವ್ಯಕ್ತಿಯನ್ನು ಪೊಲೀಸ್ ಠಾಣೆಯಲ್ಲಿ 20 ಮಂದಿಯ ಜೊತೆಗೆ ಇರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಸೋಂಕಿತ ವ್ಯಕ್ತಿಯನ್ನು ಪಾಲ್ಘರ್ ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಜೊತೆಗಿದ್ದ 20 ಮಂದಿಯನ್ನೂ ಹಾಗೂ 23 ಮಂದಿ ಪೊಲೀಸರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

      ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಅಪ್ರಾಪ್ತರು ಸೇರಿದಂತೆ 115 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿತ್ತು. ಏಪ್ರಿಲ್ 16 ರಂದು ಪಾಲ್ಘರ್ ನಲ್ಲಿ ಸಾಧುಗಳನ್ನು ಹತ್ಯೆ ಮಾಡಲಾಗಿತ್ತು, ಅಂತ್ಯಸಂಸ್ಕಾರವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಬ್ಬರು ಸಾಧುಗಳು ತಮ್ಮ ಚಾಲಕನೊಂದಿಗೆ ಕಾರಿನಲ್ಲಿ ಸೂರತ್ ನಿಂದ ಮುಂಬೈಗೆ ತೆರಳುತ್ತಿದ್ದರು.

      Palghar Lynching Accused Tests Positive For COVID-19

      ಈ ವೇಳೆ ಗ್ರಾಮಸ್ಥರು ಕಾರನ್ನು ತಡೆದಿದ್ದು, ಸಾಧುಗಳ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಘಟನೆಗೆ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು.

      ಈ ನಡುವೆ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪೊಲೀಸರು ಹುಡುಕಲು ಆರಂಭಿಸಿದ್ದಾರೆ. ಅಲ್ಲದೆ. ವ್ಯಕ್ತಿಗೆ ಸೋಂಕು ಹೇಗೆ ತಗುಲಿತು ಎಂಬುದರ ಕುರಿತಂತೆಯೂ ಅಲ್ಲಿನ ಆರೋಗ್ಯ ಇಲಾಖೆ ಪತ್ತೆ ಹಚ್ಚಲು ಕಾರ್ಯ ಆರಂಭಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+