• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಫೇಲ್ ಖರೀದಿ: ಮೋದಿ ಬಗ್ಗೆ ಜನರಲ್ಲಿ ಅನುಮಾನಗಳಿಲ್ಲ ಎಂದ ಪವಾರ್

|

ಮುಂಬೈ, ಸೆಪ್ಟೆಂಬರ್ 27: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶದ ಬಗ್ಗೆ ಜನರಿಗೆ ಯಾವ ಸಂದೇಹವೂ ಇಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅಭಿಪ್ರಾಯ ಪಟ್ಟಿದ್ದಾರೆ.

ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ. ಈ ಮಧ್ಯೆ, ಯುದ್ಧ ವಿಮಾನದ ಬಗ್ಗೆ ತಾಂತ್ರಿಕ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂಬ ವಿರೋಧ ಪಕ್ಷಗಳ ಒತ್ತಾಯ ವಿವೇಕಯುತವಲ್ಲ ಎಂದು ಮರಾಠಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕಾವಲುಗಾರನೇ ಕಳ್ಳತನ ಮಾಡಿದ್ದಾನೆ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಹಾಗಂತ ಯುದ್ಧ ವಿಮಾನದ ಖರೀದಿ ಬೆಲೆಯನ್ನು ಬಹಿರಂಗ ಮಾಡುವುದರಿಂದ ಸರಕಾರಕ್ಕೆ ಯಾವುದೇ ಹಾನಿ ಇಲ್ಲ. ಆದರೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರಕಾರದ ಪರವಾಗಿ ಮಂಡಿಸಿದ ವಿಚಾರಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಿದವು. ಸದ್ಯಕ್ಕೆ ಅರುಣ್ ಜೇಟ್ಲಿ ಮುಂದೆ ಬಂದು ಸರಕಾರದ ನಿಲುವನ್ನು ಸ್ಪಷ್ಟಪಡಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಮತ್ತೆ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ 'ರಫೇಲ್' ಯುದ್ಧ

ರಫೇಲ್ ಯುದ್ಧ ವಿಮಾನ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ತಮ್ಮ ಕೆಲವು ಉದ್ಯಮಿ ಸ್ನೇಹಿತರಿಗೆ ಅನುಕೂಲ ಮಾಡಿಕೊಡುವ ಕಾರಣಕ್ಕೆ ಸಾರ್ವಜನಿಕರ ಹಣ ಪೋಲು ಮಾಡುತ್ತಿದ್ದಾರೆ ಮತ್ತು ಸಾರ್ವಜನಿಕ ವಲಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಗೆ ಇದರಿಂದ ಅನ್ಯಾಯ ಆಗಿದೆ ಎಂದು ಆರೋಪಿಸಲಾಗಿದೆ.

English summary
Congress is mounting attacks on the government over the Rafale fighter jet issue, NCP chief Sharad Pawar has said people "do not have doubts" over Prime Minister Narendra Modi's intentions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X