ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರ ವಿವಾದ: ಮಹಾರಾಷ್ಟ್ರದ ವಿಪಕ್ಷಗಳ ಮೇಲೆ ಕಿಡಿಕಾರಿದ ಮೋದಿ

|
Google Oneindia Kannada News

ಮುಂಬೈ, ಅಕ್ಟೋಬರ್ 17: ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರನ್ನು ಸಮರ್ಥಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.

ಮಹಾರಾಷ್ಟ್ರದಲ್ಲಿ ಇದೇ ಅಕ್ಟೋಬರ್ 21 ರಂದು ನಡೆಯಲಿರುವ ವಿಧಾನಸಣೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಅವರು, ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದು ರಾಜಕೀಯಕ್ಕಾಗಿ ಅಲ್ಲ, ದೇಶಕ್ಕಾಗಿ ಎಂದರು.

ಜಲಂಗಾವ್ ನಲ್ಲಿ ವಿಪಕ್ಷಗಳಿಗೆ ಪ್ರಧಾನಿ ಮೋದಿ ಹಾಕಿದ ಸವಾಲೇನು?ಜಲಂಗಾವ್ ನಲ್ಲಿ ವಿಪಕ್ಷಗಳಿಗೆ ಪ್ರಧಾನಿ ಮೋದಿ ಹಾಕಿದ ಸವಾಲೇನು?

ಮಹಾರಾಷ್ಟ್ರ ಪರ್ಲಿ ಎಂಬಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿತ್ತಿದ್ದರು.

PM Narendra Modi attacks opposition On Kashmir Issue

"ಅತ್ಯಂತ ಹಳಲೆಯ ಪಕ್ಷವೊಂದು ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡುವ ಮೂಲಕ ಭಾರತ ಕಾಶ್ಮೀರವನ್ನು ಸಂಪೂರ್ಣವಾಗಿ ಕಳೆದುಕೊಳ್ಳುತ್ತದೆ ಎಂದಿತ್ತು. ಅಷ್ಟೇ ಅಲ್ಲ, ಈ ವಿಧಿಯನ್ನು ರದ್ದುಗೊಳಿಸುವುದರಿಂದ ದೇಶವೇ ನಾಶವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದರು. ಆದರೆ ದೇಶ ನಾಶವಾಗಿದೆಯಾ?ನಾವು ಕಾಶ್ಮೀರವನ್ನು ಕಳೆದುಕೊಂಡಿದ್ದೀವಾ? ನಿಮಗೆ ಕಾಶ್ಮೀರಕ್ಕೆ ಹೋಗಬೇಕೆಂದರೆ ಹೇಳಿ.... ನಾನು ವ್ಯವಸ್ಥೆ ಮಾಡಿಕೊಂಡುತ್ತೇನೆ" ಎಂದು ಮೋದಿ ಹೇಳಿದರು.

ಆಗಸ್ಟ್ 5 ರಂದು ಕೇಂದ್ರ ಸರ್ಕಾರವು ಭಾರತದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿತ್ತು.

English summary
PM Narendra Modi in Maharashtra attacks opposition On Kashmir Issue
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X