ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕವಿ, ಹೋರಾಟಗಾರ ವರವರ ರಾವ್‌ಗೆ ಕೊರೊನಾ ಸೋಂಕು

|
Google Oneindia Kannada News

ಮುಂಬೈ, ಜುಲೈ 16: ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ಕವಿ, ಸಾಹಿತಿ, ಹೋರಾಟಗಾರ 80 ವರ್ಷದ ವರವರ ರಾವ್ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಎಲ್ಗರ್ ಪರಿಷತ್ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

Recommended Video

Obama , Musk , Apple , Uber and may Twitter account Hacked | Oneindia Kannada

ಕಳೆದ ತಿಂಗಳು ವರವರ ರಾವ್ ಅವರಿಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯವೊಂದು ತಿರಸ್ಕರಿಸಿತ್ತು. ವಿಶೇಷ ನ್ಯಾಯಾಲಯದ ತೀರ್ಪು ವಿರೋಧಿಸಿ ಬಾಂಬೆ ಹೈಕೋರ್ಟಿಗೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಾಳೆ ನಡೆಯುವ ಸಾಧ್ಯತೆಯಿದೆ.

ಮೋದಿ ಹತ್ಯೆ ಸಂಚು: ವಿಚಾರವಾದಿ ವರವರರಾವ್ ಸೇರಿ ಆರು ಮಂದಿ ಬಂಧನಮೋದಿ ಹತ್ಯೆ ಸಂಚು: ವಿಚಾರವಾದಿ ವರವರರಾವ್ ಸೇರಿ ಆರು ಮಂದಿ ಬಂಧನ

ಅನಾರೋಗ್ಯದ ಸಮಸ್ಯೆಯಿಂದಾಗಿ ತಾಲೋಜಾ ಸೆಂಟ್ರಲ್ ಜೈಲಿನಿಂದ ಜೆಜೆ ಆಸ್ಪತ್ರೆಗೆ ವರವರ ರಾವ್ ಅವರನ್ನು ಸ್ಥಳಾಂತರಿಸಲಾಗಿತ್ತು. ಅಲ್ಲಿನ ವೈದ್ಯರು ಕೊರೋನಾ ಸೋಂಕಿನ ಪರೀಕ್ಷೆ ಮಾಡಿದ್ದು, ಪಾಸಿಟಿವ್ ವರದಿ ಬಂದಿದೆ.

Poet, Activist Varavara Rao Tests Positive For Covid-19

ಈವರೆಗೂ ವರವರ ರಾವ್ ಅವರಿಗೆ ಸೋಂಕಿನ ಲಕ್ಷಣ ಕಂಡುಬಂದಿಲ್ಲ,ಉಸಿರಾಟದ ಸಮಸ್ಯೆಯೂ ಕಂಡುಬಂದಿಲ್ಲ. ಆರೋಗ್ಯವಾಗಿದ್ದಾರೆ.ಶೀಘ್ರದಲ್ಲಿಯೇ ಅವರನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಜೆಜೆ ಆಸ್ಪತ್ರೆ ಡೀನ್ ಡಾ. ರಂಜಿತ್ ಮಾಂಕೇಶ್ವರ್ ತಿಳಿಸಿದ್ದಾರೆ.ಸೆಂಟ್ ಜಾರ್ಜ್ ಆಸ್ಪತ್ರೆಗೆ ರಾವ್ ಅವರನ್ನು ಸ್ಥಳಾಂತರಿಸುವ ಸಾಧ್ಯತೆಯಿದೆ.

ವರವರ ರಾವ್ ಅವರ ಆರೋಗ್ಯ ಕ್ಷೀಣಿಸಿದ್ದು, ಕೂಡಲೇ ಅವರಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕೆಂದು ಅವರ ಕುಟುಂಬಸ್ಥರು ಕಳೆದ ವಾರ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದ್ದರು.

English summary
Poet-activist Varavara Rao has tested positive for Covid-19. The 80-year old, named as accused in the Elgar Parishad case, was shifted to state-run JJ Hospital from Taloja central jail where he was lodged after he complained of dizziness.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X