• search
 • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

55 ವರ್ಷ ಮೇಲ್ಪಟ್ಟ ಪೊಲೀಸರಿಗೆ ಮನೆಯಲ್ಲೇ ಇರಲು ಸೂಚನೆ

|

ಮುಂಬೈ, ಏಪ್ರಿಲ್ 28 : ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಅದರಲ್ಲೂ ಮುಂಬೈ ಮಹಾನಗರದಲ್ಲಿ ಸೋಂಕಿತರ ಸಂಖ್ಯೆ 5 ಸಾವಿರದ ಗಡಿ ದಾಟಿದೆ. ನಗರದ ಭದ್ರತೆಗೆ ನಿಯೋಜನೆಗೊಂಡಿದ್ದ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.

   ಸೋನಿಯಾ ಗಾಂಧಿ ವಿರುದ್ಧ ಮಾತನಾಡಿದ ಹಿನ್ನೆಲೆಯಲ್ಲಿ ಅರ್ನಬ್‌ ಸತತ 12 ಗಂಟೆಗಳ ಕಾಲ ವಿಚಾರಣೆ

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಮುಂಬೈ ನಗರದಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಆದ್ದರಿಂದ, ನಗರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ.

   ಕೊರೊನಾ; ಒಂದೇ ದಿನದಲ್ಲಿ ಹೆಚ್ಚು ಸಾವು, ದಾಖಲೆ ಬರೆದ ಭಾರತ

   "ಮೃತಪಟ್ಟ ಎಲ್ಲಾ ಪೊಲೀಸ್ ಸಿಬ್ಬಂದಿಗಳು 50 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರು. ಆದ್ದರಿಂದ, 55 ವರ್ಷ ಮೇಲ್ಪಟ್ಟವರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ" ಎಂದು ಮುಂಬೈ ನಗರ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಹೇಳಿದ್ದಾರೆ.

   ಮುಂಬೈ ವ್ಯಕ್ತಿಯಿಂದ ಮಂಡ್ಯದ ನಾಗಮಂಗಲಕ್ಕೆ ಬಂತು ಕೊರೊನಾ

   ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ 55 ವರ್ಷ ಮೇಲ್ಪಟ್ಟವರು ಕೊರೊನಾ ಸೋಂಕಿಗೆ ಸುಲಭವಾಗಿ ತುತ್ತಾಗುತ್ತಾರೆ. ಸೋಂಕು ತಗುಲಿದರೆ ಚೇತರಿಸಿಕೊಳ್ಳುವುದು ಕಷ್ಟವಾಗಿದೆ. ಆದ್ದರಿಂದ, ಅವರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚನೆ ಕೊಡಲಾಗಿದೆ.

   ಕೊರೊನಾ ವಿರುದ್ಧ ಹೋರಾಡಲು ನರ್ಸ್ ಆದ ಮುಂಬೈ ಮೇಯರ್

   ಮುಂಬೈ ನಗರದಲ್ಲಿ ಇದುವರೆಗೂ 5776 ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿದೆ. ಸೋಮವಾರದ ತನಕ 219 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.

   English summary
   Policemen over 55 years will not be on duty in Mumbai city. Policemen asked to stay home after three cops died of due to Coronavirus in the city.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X