ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ಫಲಿತಾಂಶದಿಂದ ರಾಷ್ಟ್ರ ರಾಜಕಾರಣದ ಮುಂದಿನ ನಡೆ ನಿರ್ಧಾರ:ಸಂಜಯ್ ರಾವತ್

|
Google Oneindia Kannada News

ಮುಂಬೈ, ಏಪ್ರಿಲ್ 1: ಚುನಾವಣಾ ಫಲಿತಾಂಶವು ರಾಷ್ಟ್ರ ರಾಜಕಾರಣದ ಮುಂದಿನ ನಡೆ ನಿರ್ಧರಿಸಲಿದೆ ಎಂದು ಶಿವಸೇನಾ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಈ ನಾಲ್ಕು ರಾಜ್ಯಗಳಲ್ಲಿ ವಿಶೇಷವಾಗಿ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಚುನಾವಣೆಯ ಫಲಿತಾಂಶವು ಮುಂದಿನ ರಾಷ್ಟ್ರ ರಾಜಕಾರಣವನ್ನು ನಿರ್ಧರಿಸಲಿದೆ ಎಂದಿದ್ದಾರೆ.

ಸಚಿನ್ ವಾಜೆ ಬಗ್ಗೆ ಮೊದಲೇ ತಿಳಿದಿತ್ತು, ಮುಖಂಡರಿಗೆ ಎಚ್ಚರಿಕೆಯನ್ನೂ ನೀಡಿದ್ದೆ: ಸಂಜಯ್ ರಾವತ್ಸಚಿನ್ ವಾಜೆ ಬಗ್ಗೆ ಮೊದಲೇ ತಿಳಿದಿತ್ತು, ಮುಖಂಡರಿಗೆ ಎಚ್ಚರಿಕೆಯನ್ನೂ ನೀಡಿದ್ದೆ: ಸಂಜಯ್ ರಾವತ್

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣೆ ಮಹಾಭಾರತಕ್ಕಿಂತಲೂ ತೀಕ್ಷ್ಣವಾಗಿ ಹೇಳಿರುವ ರಾವತ್ ದೇಶವೇ ಆ ರಾಜ್ಯದ ಚುನಾವಣೆಯನ್ನು ಗಮನಿಸುತ್ತಿದೆ, ಹಾಗೆಯೇ ಆ ರಾಜ್ಯದ ಮತದಾರರು ಬಹಳ ಬುದ್ಧಿವಂತರಾಗಿದ್ದಾರೆ ಎಂದರು.

Poll Results In 4 States To Decide Course Of National Politics: Raut

ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಆದರೆ ಕಾಂಗ್ರೆಸ್ ಪಕ್ಷ ಗೆಲುವುದಕ್ಕಾಗಿ ಕಠಿಣ ಹೋರಾಟ ನಡೆಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿದೆ.

ಆದರೆ, ಮಮತಾ ಅವರು ಹೆಣ್ಣು ಹುಲಿಯಂತೆಯೇ ಹೋರಾಡುತ್ತಿದ್ದು, ಅವರು ಗೆಲ್ಲುವುದು ನಿಶ್ಚಿತವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರ ಮನಸ್ಥಿತಿಯನ್ನು ಸಹ ನಾವು ಊಹಿಸಬಹುದಾಗಿದೆ ಎಂದರು.

ಮಮತಾ ಅವರು ಬಿಜೆಪಿ ವಿರುದ್ಧ ಹೋರಾಡಲು ಇದು ಉತ್ತಮ ಕಾಲ, ಎಲ್ಲರೂ ಕೈಜೋಡಿಸಿ ಎಂದು ಬಿಜೆಪಿಯೇತರ ಪಕ್ಷಗಳ ಮುಖಂಡರಿಗೆ ಪತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶಗಳು ರಾಷ್ಟ್ರ ರಾಜಕಾರಣದ ಮುಂದಿನ ಹಾದಿಯನ್ನು ನಿರ್ದರಿಸುತ್ತವೆ.

ಈ ಚುನಾವಣೆಯ ನಂತರ ಒಂದು ಸ್ಪಷ್ಟ ಚಿತ್ರಣ ಸಿಗಲಿದ್ದು, ಆಗ ಮೈತ್ರಿಗಳ ಸ್ವರೂಪ ಕುರಿತು ಚರ್ಚಿಸಲಾಗುತ್ತದೆ ಎಂದು ಹೇಳಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

English summary
Shiv Sena leader Sanjay Raut on Thursday said the results of Assembly polls in four states, specially Assam and West Bengal, will decide the next course of national politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X