ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್ ಮೈತ್ರಿ? ಕಾಂಗ್ರೆಸ್ ಹೇಳಿದ್ದೇನು?

ಮುಂಬೈ, ಅಕ್ಟೋಬರ್ 25: ಮಹಾರಾಷ್ಟ್ರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಚುನಾವಣಾ ಫಲಿತಾಂಶ ಹೊರಬೀಳದ ಪರಿಣಾಮ ಆತಂಕದಲ್ಲಿರುವ ಬಿಜೆಪಿಗೆ ಕೆಲವು ವದಂತಿಗಳು ಮತ್ತಷ್ಟು ಆತಂಕ ಹುಟ್ಟುವಂತೆ ಮಾಡಿದೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಶಿವಸೇನೆ ಮೈತ್ರಿ ಸಾಧ್ಯತೆಯ ಬಗ್ಗೆ ವದಂತಿಗಳು ಹರಿದಿದ್ದು, ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾಸಾಹೆಬ್ ಥಾರೋಟ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, "ಶಿವಸೇನೆಯಿಂದ ಇದುವರೆಗೆ ಈ ಬಗ್ಗೆ ಯಾವುದೇ ರೀತಿಯ ಪ್ರಸ್ತಾಪ ಬಂದಿಲ್ಲ. ಅವರಿಂದ ಯಾವುದಾದರೂ ಪ್ರಸ್ತಾವನೆ ಬಂದರೆ ನಾವು ಆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ ನಡೆಸುತ್ತೇವೆ" ಎಂದು ಅವರು ಹೇಳಿದರು.

Possibility Of Congress-Shiv Sena Alliance in Maharshtra: Congress Reaction

ಮಹಾರಾಷ್ಟ್ರದ 288 ಕ್ಷೇತ್ರಗಳ್ಲಲಿ ಬಿಜೆಪಿ 105 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಶಿವಸೇನೆ 56, ಎನ್ ಸಿಪಿ 54, ಕಾಂಗ್ರೆಸ್ 44 ಕ್ಷೇತ್ರಗಳಲ್ಲಿ ಗೆದ್ದಿವೆ.

ಬಿಜೆಪಿಯನ್ನು ಹೊರಗಿಟ್ಟು ಶಿವಸೇನೆ, ಕಾಂಗ್ರೆಸ್ ಎನ್ ಸಿಪಿ ಸೇರಿ ಸರ್ಕಾರ ರಚಿಸಲು ಮುಂದಾಗಬಹುದು ಎಂಬ ವದಂತಿಯೂ ಹಬ್ಬಿದೆ. ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಇಟ್ಟಿರುವ ಶಿವಸೇನೆ, ಬಿಜೆಪಿಯೊಂದಿಗಿನ ಮೈತ್ರಿಯಿಂದ ಅದು ಸಿಗುವುದಿಲ್ಲವಾದರೆ ಮಿಕ್ಕೆರಡು ಪಕ್ಷಗಳೊಂದಿಗೆ ಮಂತ್ರಿ ಮಾಡಿಕೊಂಡು ತನ್ನ ಬೇಡಿಕೆಯನ್ನು ಈಡೇರಿಸಿಕೊಂಡರೆ ಅಚ್ಚರಿಯಿಲ್ಲ ಎಂಬ ಮಾತು ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+