ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಸ್ವಾಗತಿಸಿದ ಶಿವಸೇನೆ
ಮುಂಬೈ, ಜನವರಿ 24: ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಆಗಮಿಸಿರುವುದು ಕಾಂಗ್ರೆಸ್ಸಿಗೆ ಭಾರೀ ಲಾಭವನ್ನುಂಟು ಮಾಡಲಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ವಾಧ್ರಾ ಅವರ ರಾಜಕೀಯ ಪ್ರವೇಶವನ್ನು ಸ್ವಾಗತಿಸಿದ ರಾವತ್, "ರಾಹುಲ್ ಗಾಂಧಿ ಆವರು ಅತ್ಯುತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಭಾರತದ ಜನರಲ್ಲಿ ಗಾಂಧಿ ಕುಟುಂಬದೊಂದಿಗೆ ಉತ್ತಮ ಸಂಬಂಧವಿದೆ. ಇಂದಿರಾ ಗಾಂಧಿ ಅವರ ಪರಂಪರೆ ಈ ದೇಶದಲ್ಲಿ ಹಾಗೆಯೇ ಉಳಿಯಲಿದೆ. ಪ್ರಿಯಾಂಕಾ ಆಗಮನದಿಂದ ಕಾಂಗ್ರೆಸ್ಸಿಗೆ ಲಾಭವಾಗಲಿದೆ" ಎಂದು ರಾವತ್ ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರನ್ನು ಬುಧವಾರ ಎಐಸಿಸಿ(ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಮೂಲಕ ಕಾಂಗ್ರೆಸ್ ಅವರನ್ನು ಸಕ್ರಿಯ ರಾಜಕಾರಣಕ್ಕೆ ಆಹ್ವಾನಿಸಿದೆ.












Click it and Unblock the Notifications