• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರತದ ಕೊರೊನಾ ಹಾಟ್‌ಸ್ಪಾಟ್ ಮುಂಬೈ ಅಲ್ಲ, ಮತ್ಯಾವ್ದು?

|
Google Oneindia Kannada News

ಮುಂಬೈ, ಆಗಸ್ಟ್ 17: ಭಾರತದ ಕೊರೊನಾ ಹಾಟ್‌ಸ್ಪಾಟ್ ಮುಂಬೈ ಅಲ್ಲ ಬದಲಾಗಿ ಪುಣೆ.
ಭಾನುವಾರ ಅತಿ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳು ಪುಣೆಯಲ್ಲಿ ಪತ್ತೆಯಾಗಿದೆ. ಇಷ್ಟು ದಿನ ಮುಂಬೈನಲ್ಲಿ ನಿತ್ಯ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದವು.

ಮಹಾರಾಷ್ಟ್ರವು ದಕ್ಷಿಣ ಆಫ್ರಿಕಾವನ್ನು ಹಿಂದಕ್ಕೆ ಹಾಕಿದ್ದು 5,95,865 ಪ್ರಕರಣಗಳಿವೆ. ಅಮೆರಿಕದಲ್ಲಿ 5,566.632, ಬ್ರೆಜಿಲ್ 3,340,197, ರಷ್ಯಾದಲ್ಲಿ 922,853 ಪ್ರಕರಣಗಳಿವೆ.

ಭಾರತ; 24 ಗಂಟೆಯಲ್ಲಿ 63 ಸಾವಿರ ಕೋವಿಡ್ ಪ್ರಕರಣಭಾರತ; 24 ಗಂಟೆಯಲ್ಲಿ 63 ಸಾವಿರ ಕೋವಿಡ್ ಪ್ರಕರಣ

ಭಾರತದಲ್ಲಿ ಕೊರೊನಾ ಸೋಂಕಿನಿಂದ ಅತಿ ಹೆಚ್ಚು ಮಂದಿ ಸಾವನ್ನಪ್ಪಿರುವುದು ಮಹಾರಾಷ್ಟ್ರದಲ್ಲಿ, ಮಹಾರಾಷ್ಟ್ರದಲ್ಲಿ ಕಳೆದ ನಾಲ್ಕು ದಿನದಿಂದ 300ಕ್ಕಿಂತಲೂ ಕಡಿಮೆ ಮಂದಿ ಸಾವನ್ನಪ್ಪುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ 20,037 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 595,865 ಮಂದಿ ಸೋಂಕಿತರಿದ್ದಾರೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ.69.82ರಷ್ಟಿದೆ. ಇದುವರೆಗೆ 417123 ಮಂದಿ ಗುಣಮುಖರಾಗಿದ್ದಾರೆ.ಪುಣೆಯಲ್ಲಿ 130,60 ಕೊರೊನಾ ಸೋಂಕಿತ ಪ್ರಕರಣಗಳಿವೆ, 41,020 ಸಕ್ರಿಯ ಪ್ರಕರಣಗಳಿವೆ, 3193 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 63,000 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಭಾರತದಲ್ಲಿ ಇದುವರೆಗೂ 2,93,09,703 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್‌ ಹೇಳಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬೆಳಗ್ಗೆ 8ರಿಂದ ಭಾನುವಾರ ಬೆಳಗ್ಗೆ 8 ಗಂಟೆ ತನಕ ದೇಶದಲ್ಲಿ 63,000 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. 944 ಜನರು ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

English summary
Pune, the academic and cultural capital of Maharashtra, on Sunday emerged as India’s new "corona capital" after it recorded the maximum COVID-19 cases, a report said on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X