ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈನಲ್ಲಿ ಬೆಳ್ಳಂಬೆಳಗ್ಗೆ ರೈಲಿಗೆ ಅಡ್ಡ ನಿಂತರು ಜನ, ಯಾಕೆ ಗೊತ್ತಾ?

|
Google Oneindia Kannada News

ಮುಂಬೈ, ಜನವರಿ.29: ಮಹಾರಾಷ್ಟ್ರದಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಹೋರಾಟ ತೀವ್ರಗೊಂಡಿದೆ. ಬುಧವಾರ ಬೆಳ್ಳಂಬೆಳಗ್ಗೆ ರೈಲ್ವೆ ಟ್ರ್ಯಾಕ್ ಗೆ ಇಳಿದ ಪ್ರತಿಭಟನಾಕಾರರು ರೈಲು ತಡೆ ನಡೆಸಿದರು.

ಬೆಳಗ್ಗೆ 8 ಗಂಟೆ ಸುಮಾರಿಗೆ ಕಂಜೂರ್ ಮಾರ್ಗ್ ರೈಲ್ವೆ ನಿಲ್ದಾಣದ ಬಳಿ ಬಹುಜನ ಕ್ರಾಂತಿ ಮೋರ್ಚಾ ಸಂಘಟನೆಯ ಕಾರ್ಯಕರ್ತರು ಲೋಕಲ್ ಟ್ರೈನ್ ನ್ನು ತಡೆದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿದರು.

ಸಿಎಎ ವಿರುದ್ಧ ವಿದ್ಯಾರ್ಥಿಗಳ ನಾಟಕ ಮಾಡಿದ್ದಕ್ಕೆ ಬಿತ್ತು ಕೇಸ್!ಸಿಎಎ ವಿರುದ್ಧ ವಿದ್ಯಾರ್ಥಿಗಳ ನಾಟಕ ಮಾಡಿದ್ದಕ್ಕೆ ಬಿತ್ತು ಕೇಸ್!

ಇನ್ನು, ಸಿಎಎ ಹಾಗೂ ಎನ್ ಆರ್ ಸಿ ವಿರುದ್ಧ ನಡೆದ ಪ್ರತಿಭಟನೆಯಿಂದ ರೈಲು ಪ್ರಯಾಣಿಕರು ನರಕಯಾತನೆ ಅನುಭವಿಸುವಂತಾಗಿತ್ತು. ಬೆಳ್ಳಂಬೆಳಗ್ಗೆ ರೈಲು ತಡೆ ನಡೆಸಿದ್ದರಿಂದ ಕಚೇರಿ ಕೆಲಸಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು.

Rail Ruko Protest In Mumbai Against Citizenship Amendment Act

ಪ್ರಯಾಣಿಕರು ಪ್ರತಿಭಟನಾಕಾರರ ನಡುವೆ ವಾಗ್ಯುದ್ಧ:

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪೋಸ್ಟರ್ ಗಳನ್ನು ಪ್ರದರ್ಶಿಸುತ್ತಾ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ರೈಲ್ವೆ ಹಳಿಗಳ ಮೇಲೆಯೇ ನಿಂತು ರೈಲ್ವೆ ಸಂಚಾರಕ್ಕೆ ಅಡ್ಡಿಪಡಿಸಿದರು. ಇದರಿಂದ ಕೆರಳಿದ ಕೆಲವು ಪ್ರಯಾಣಿಕರು ರೈಲಿನಿಂದ ಇಳಿದು ನಡೆದುಕೊಂಡೇ ಅಲ್ಲಿಂದ ತೆರಳಿದರು.

ಇನ್ನೊಂದೆಡೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಹುಜನ ಕ್ರಾಂತಿ ಮೋರ್ಚಾ ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಯಾಣಿಕರು ಕೆರಳಿದರು. ರೈಲು ತಡೆಯುವ ಮೂಲಕ ಸಾರ್ವಜನಿಕರಿಗೆ ತೊಂದರೆ ಕೊಡುವುದೆಷ್ಟು ಸರಿ ಎಂದು ಕಿಡಿ ಕಾರಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ರೈಲು ಪ್ರಯಾಣಿಕರ ನಡುವೆ ಮಾತಿಕ ಚಕಮಕಿ ನಡೆಯಿತು.

English summary
Rail Ruko Protest In Mumbai Against Citizenship Amendment Act. Bahujan Kranti Morcha Block Railway Track In Kanjurmarg Station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X