ಕಾಂಗ್ರೆಸ್ ನಾಯಕಿ ಪುತ್ರಿಗೆ ಅತ್ಯಾಚಾರ ಬೆದರಿಕೆ: ಆರೋಪಿ ಬಂಧನ

ಮುಂಬೈ, ಜುಲೈ 05: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರ್ ನಲ್ಲಿ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಅಹ್ಮದಾಬಾದ್ ಮೂಲದವನೆಂದು ಗುರುತಿಸಲಾಗಿದೆ. ಪ್ರಿಯಾಂಕಾ ಚತುರ್ವೇದಿ ಅವರ 10 ವರ್ಷದ ಮಗಳ ಮೇಲೆ ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರ್ ನಲ್ಲಿ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದ. ಈ ಕುರಿತು ಅವರು ಪೊಲಿಸರಿಗೆ ದೂರು ನೀಡಿದ್ದರು.

ನಾವು ರಾಜಕಾರಣಿಗಳು ಪ್ರತಿದಿನ ಟ್ರೋಲ್ ಆಗುತ್ತೇವೆ. ಅದೇನು ಹೊಸತಲ್ಲ. ಆದರೆ ನನ್ನ ಮಗಳ ಬಗ್ಗೆ ಮಾತನಾಡುವುದು ಸರಿಯೇ? ಅದೂ ಇಷ್ಟು ಅವಾಚ್ಯವಾಗಿ? ಅದಕ್ಕೆಂದೇ ನಾನು ಅವರ ವಿರುದ್ಧ ದೂರು ನೀಡಬೇಕೆಂದು ನಿರ್ಧರಿಸಿದ್ದೇನೆ' ಎಂದು ಪ್ರಿಯಾಂಕಾ ಚತುರ್ವೇದಿ ಹೇಳಿದ್ದರು.

Rape threat to Priyanka Chaturvedis daughter: accused arrested

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯರನ್ನು ಟ್ರೋಲ್ ಮಾಡುತ್ತಿರುವುದು ಹೆಚ್ಚಾಗಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನೂ ಟ್ರೋಲ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+