ಮಾಲೆಗಾಂವ್ ಸ್ಫೋಟದ ಬಗ್ಗೆ ಗೊತ್ತೇ ಇಲ್ಲ ಎಂದ ಸಂಸದೆ ಸಾಧ್ವಿ ಪ್ರಗ್ಯಾ
ಮುಂಬೈ, ಜೂನ್ 7: ಕಳೆದ ಎರಡು ವಾರ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ 2008ರ ಮಾಲೆಗಾಂವ್ ಬಾಂಬ್ ಸ್ಫೋಟದ ಆರೋಪಿ, ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಮುಂಬೈನ ವಿಶೇಷ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರಾದರು.
ಈ ವೇಳೆ ಎನ್‌ಐಎ ವಿಶೇಷ ನ್ಯಾಯಾಧೀಶ ವಿಎಸ್ ಪಡಾಲ್ಕರ್, ಸ್ಫೋಟಕ್ಕೆ ಸಂಬಂಧಿಸಿದಂತೆ ಏನಾದರೂ ಹೇಳುವುದು ಇದೆಯೇ ಎಂದು ಪ್ರಶ್ನಿಸಿದಾಗ ಸಾಧ್ವಿ 'ನನಗೇನೂ ಗೊತ್ತಿಲ್ಲ' ಎಂದು ಉತ್ತರಿಸಿದರು.
ಸಾಧ್ವಿ ಅವರಿಗೆ ಕೂರಲು ಅನುಕೂಲವಾಗುವಂತೆ ಬೆಂಚ್‌ನ ಮೇಲೆ ಕೇಸರಿ ಬಣ್ಣದ ಮೃದುವಾದ ಬಟ್ಟೆ ಹಾಸಲಾಗಿತ್ತು. ಕೇಸರಿ ಉಡುಪು ಧರಿಸಿ ಬಂದಿದ್ದ ಸಾಧ್ವಿ ಅವರನ್ನು ಆರೋಪಿ ಕಟಕಟೆಗೆ ಬರುವಂತೆ ಸೂಚಿಸಲಾಯಿತು. ವಿಚಾರಣೆ ವೇಳೆ 2008ರ ಸೆಪ್ಟೆಂಬರ್ 29ರಂದು ನಡೆದ ಸ್ಫೋಟದ ಬಗ್ಗೆ ತಿಳಿದಿದೆಯೇ ಎಂದು ನ್ಯಾಯಾಲಯ ಪ್ರಶ್ನಿಸಿತು.

ಈ ಸಂದರ್ಭದಲ್ಲಿ ಕರ್ಚೀಫ್ ತೆಗೆದ ಸಾಧ್ವಿ ಮುಖ ಒರೆಸಿಕೊಂಡರು. '116 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಹೇಳಿಕೆಯಂತೆ ಬಾಂಬ್ ಸ್ಫೋಟ ಸಂಭವಿಸಿದೆ. ಅದನ್ನು ಯಾರು ಮಾಡಿದ್ದು ಎಂದು ನಾನು ಕೇಳುತ್ತಿಲ್ಲ. 2008 ಸೆಪ್ಟೆಂಬರ್‌ನಲ್ಲಿ ಬಾಂಬ್ ಸ್ಫೋಟ ನಡೆದಿದ್ದರ ಬಗ್ಗೆ ನಿಮಗೆ ಗೊತ್ತಿದೆಯೇ?' ಎಂದು ನ್ಯಾಯಾಧೀಶರು ಕೇಳಿದರು. ಆಗ ಸಾಧ್ವಿ 'ನನಗೆ ಯಾವುದೇ ಮಾಹಿತಿ ಇಲ್ಲ; ಎಂದರು.
ಪ್ರಕರಣದ ವಿಚಾರಣೆ ಕುರಿತು ಕೇಳಿದಾಗ ನ್ಯಾಯಾಲಯವು ಎಷ್ಟು ಜನ ಸಾಕ್ಷಿಗಳನ್ನು ವಿಚಾರಣೆ ಮಾಡಿದೆ ಎಂಬುದು ತಮಗೆ ಅರಿವಿಲ್ಲ ಎಂದು ಹೇಳಿದರು.
ಸಾಧ್ವಿ ಅವರು ಗುರುವಾರ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವುದರಿಂದ ವಿನಾಯಿತಿ ನೀಡಬೇಕು ಎಂದು ವಕೀಲರು ಕೋರಿದ್ದರು. ಒಂದು ದಿನದ ವಿನಾಯಿತಿ ನೀಡುತ್ತೇನೆ. ಆದರೆ, ಶುಕ್ರವಾರವೂ ಗೈರಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications