ಸಲ್ಮಾನ್ ಕೇಸ್ ಫೈಲ್ 2012ರಲ್ಲೇ ಬೆಂಕಿಗೆ ಆಹುತಿ!
ಮುಂಬೈ, ಮೇ.28: ನಟ ಸಲ್ಮಾನ್ ಖಾನ್ ಅಪರಾಧಿಯಾಗಿರುವ ಹಿಟ್ ಅಂಡ್ ರನ್ ಕೇಸಿಗೆ ಸಂಬಂಧಿಸಿದ ಪ್ರಮುಖ ಕಡತಗಳು 2012ರಲ್ಲೇ ಬೆಂಕಿ ಅನಾಹುತದಲ್ಲಿ ಭಸ್ಮವಾಗಿದೆ ಎಂಬ ಅಘಾತಕಾರಿ ಸುದ್ದಿ ಬಂದಿದೆ. ಹತ್ತು ಹಲವು ತಿರುವುಗಳನ್ನು ಪಡೆದುಕೊಂಡಿರುವ ಈ ಪ್ರಕರಣ ಮತ್ತೆ ಸುದ್ದಿಗೆ ಬಂದಿದೆ. [ಮುಂಬೈ ಸಚಿವಾಲಯದಲ್ಲಿ ಬೆಂಕಿ, ಐವರು ಬಲಿ]
2002ರ ಹಿಟ್ ಅಂಡ್ ರನ್ ಕೇಸಿನಲ್ಲಿ ಅಪರಾಧಿ ಎನಿಸಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಜೈಲುವಾಸ ತಪ್ಪಿಸಿಕೊಂಡಿದ್ದಾರೆ. ಸೆಷನ್ಸ್ ಕೋರ್ಟ್ ವಿಧಿಸಿದ್ದ 5 ವರ್ಷ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಅಮಾನತುಗೊಳಿಸಿತ್ತು. ನಂತರ ಜಾಮೀನು ಪಡೆದ ಸಲ್ಮಾನ್ ಖಾನ್ ಈಗ ಭಜರಂಗಿ ಭಾಯಿಜಾನ್ ಶೂಟಿಂಗ್ ಮುಗಿಸಿಕೊಂಡು ದುಬೈಗೆ ಹಾರಲು ಸಿದ್ದರಾಗುತ್ತಿದ್ದಾರೆ. [ಸಲ್ಮಾನ್ ಖಾನ್ ಮೇಲೆ ವಿಧಿಸಿದ್ದ ಶಿಕ್ಷೆ ಅಮಾನತು]

2002ರ ಈ ರಸ್ತೆ ಅಪಘಾತಕ್ಕೆ ಸಂಬಂಧಿಸಿದ ಫೈಲ್ಸ್ ಎಲ್ಲಾ ಮುಂಬೈನಲ್ಲಿ 2012ರಲ್ಲಿ ನಡೆದ ಅಗ್ನಿ ದುರಂತದಲ್ಲಿ ನಾಶವಾಗಿದೆ ಎಂಬ ಸುದ್ದಿ ಬಂದಿದೆ. [ಹಿಟ್ ಅಂಡ್ ರನ್ ಕೇಸ್ ಟೈಮ್ ಲೈನ್]
ಈ ಬಗ್ಗೆ ಮಹಾರಾಷ್ಟ್ರ ಸರ್ಕಾರವಾಗಲಿ, ನ್ಯಾಯಾಂಗವಾಗಲಿ ತಲೆ ಕೆಡಿಸಿಕೊಂಡಿಲ್ಲ. ಸಲ್ಮಾನ್ ಖಾನ್ ಅವರು ಆರೋಪ ಈಗ ಸಾಬೀತಾಗಿ ಅವರು ಅಪರಾಧಿ ಎನಿಸಿರಬಹುದು ಅದರೆ, ಈ ಪ್ರಕರಣಕ್ಕೆ ಸಂಬಂಧಿಸಿದ ಮೂಲ ದಾಖಲೆಗಳ ಪೈಕಿ ಒಂದು ಉಳಿದಿಲ್ಲ. [ಸಲ್ಲೂಗೆ 'ದೇವರಾದ' ಸಾಳ್ವೆ]
ಮನ್ಸೂರ್ ದರ್ವೇಶ್ ಎಂಬ ಹೆಸರಿನ ಆರ್ ಟಿಐ ಕಾರ್ಯಕರ್ತ ಈ ಬಗ್ಗೆ ವಿವರಣೆ ಕೋರಿ ಅರ್ಜಿ ಸಲ್ಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಜಾಮೀನು ಅವಧಿ ಜೂನ್.15ಕ್ಕೆ ಮುಕ್ತಾಯವಾಗಲಿದೆ. ಸಲ್ಲೂ ಹೊಸ ಸಿನಿಮಾ ಭಜರಂಗಿ ಭಾಯಿಜಾನ್ ಜೂ.18ಕ್ಕೆ ಬಿಡುಗಡೆಯಾಗುವ ಸಾಧ್ಯತೆಯಿದೆ. [ಸಲ್ಮಾನ್ ಗೆ ರಕ್ಷೆ ನೀಡಿದ 'ಬೀಯಿಂಗ್ ಹ್ಯೂಮನ್']
ಸೆಷನ್ಸ್ ಕೋರ್ಟ್ ವಿಧಿಸಿದ್ದ 5 ವರ್ಷ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಮೇ.8ರಂದು ಅಮಾನತುಗೊಳಿಸಿತ್ತು. ಅದರೆ, ಪ್ರತಿ ಬಾರಿ ವಿದೇಶಿ ಪ್ರವಾಸ ಕೈಗೊಳ್ಳಬೇಕಾದರೆ ಕೋರ್ಟಿನ ಅನುಮತಿ ಪಡೆಯಬೇಕು ಎಂದು ಷರತ್ತು ವಿಧಿಸಲಾಗಿತ್ತು. ಸೆ.28, 2002ರಂದು ಸಲ್ಮಾನ್ ಖಾನ್ ಅವರಿದ್ದ ಲ್ಯಾಂಡ್ ರೋವರ್ ವಾಹನ ಅಡ್ಡಾದಿಡ್ಡಿ ಚಲಿಸಿ ಫುಟ್ ಪಾತ್ ನಲ್ಲಿದ್ದ ಒಬ್ಬ ವ್ಯಕ್ತಿ ಸಾವಿಗೆ ಕಾರಣವಾಗಿತ್ತು. ಘಟನೆಯಲ್ಲಿ ನಾಲ್ವರ ಗಾಯಗೊಂಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications