• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುಶಾಂತ್ ಸಿಂಗ್ ಆತ್ಮಹತ್ಯೆ: ಸಂಜಯ್ ಲೀಲಾ ಬನ್ಸಾಲಿ ವಿಚಾರಣೆ

|

ಮುಂಬೈ, ಜುಲೈ 2: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ 30 ಜನರ ವಿಚಾರಣೆ ಮಾಡಲಾಗಿದೆ.

ಇದೀಗ, ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರನ್ನು ಮುಂಬೈ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಸುಶಾಂತ್ ಸಾವಿನ ಬಗ್ಗೆ ಬನ್ಸಾಲಿ ಅವರಿಂದ ಈ ವಾರದಲ್ಲಿ ಹೇಳಿಕೆ ಪಡೆಯಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

ಸುಶಾಂತ್ ಸಿಂಗ್ ಆತ್ಮಹತ್ಯೆ: ಸಲ್ಮಾನ್ ಖಾನ್ ಸೇರಿ 8 ಮಂದಿ ವಿರುದ್ಧ ಕೇಸ್

ಈ ಕುರಿತು ಈಗಾಗಲೇ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದು, ಅವರು ಸಹ ಸಮ್ಮತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಈವರೆಗೂ ಕುಟುಂಬಸ್ಥರು, ಗೆಳತಿ ರಿಯಾ ಚಕ್ರವರ್ತಿ, ಸ್ನೇಹಿತ ಮುಖೇಶ್, ಯಶ್ ರಾಜ್ ಫಿಲಂಸ್ ಕಾಸ್ಟಿಂಗ್ ನಿರ್ದೇಶಕ ಶಾನೋ ಶರ್ಮಾ ಸೇರಿದಂತೆ 30 ಜನರ ಹೇಳಿಕೆ ಪಡೆಯಲಾಗಿದೆ.

ಅಂದ್ಹಾಗೆ, ಸುಶಾಂತ್ ಸಿಂಗ್ ಜೂನ್ 14 ರಂದು ಬಾಂದ್ರಾದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಪ್ರಾಥಮಿಕ ವರದಿ ಹಾಗೂ ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿರುವ ಕಾರಣ ಬಾಲಿವುಡ್ ಸೆಲೆಬ್ರಿಟಿಗಳು ವಿಚಾರಣೆ ಮಾಡಲಾಗುತ್ತಿದೆ.

ಇನ್ನು ಸುಶಾಂತ್ ಸಾವಿನ ಹಿನ್ನೆಲೆ ಪಾಟ್ನಾದ ನ್ಯಾಯಾಲಯದಲ್ಲಿ ಸಲ್ಮಾನ್ ಖಾನ್, ಸಂಜಯ್ ಲೀಲಾ ಬನ್ಸಾಲಿ, ಕರಣ್ ಜೋಹರ್ ಸೇರಿದಂತೆ ಹಲವು ಜನರ ಮೇಲೆ ಕೇಸ್ ದಾಖಲಾಗಿದೆ. ನಟಿ ಹಾಗೂ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧವೂ ದೂರು ದಾಖಲಾಗಿದೆ.

English summary
Bollywood Director Sanjay Leela Bhansali to be questioned by the Mumbai police in Sushant Singh Rajput death case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X