ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ಸಿನಿಂದ ಹಿರಿಯ ನಾಯಕ ಸತೀಶ್ ಉಚ್ಚಾಟನೆ

By Mahesh
|
Google Oneindia Kannada News

ಮುಂಬೈ(ಮಹಾರಾಷ್ಟ್ರ), ಫೆಬ್ರವರಿ 23: ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಚತುರ್ವೇದಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪ ಹೊರೆಸಲಾಗಿದೆ. ಮಹಾರಾಷ್ಟ್ರದ ಮಾಜಿ ಸಚಿವ ಸತೀಶ್ ರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯು ಗುರುವಾರ(ಫೆಬ್ರವರಿ 23) ದಂದು ಪತ್ರಿಕಾ ಪ್ರಕಟಣೆ ಹೊರಡಿಸಿ, ಈ ಕೂಡಲೇ ಹಿರಿಯ ನಾಯಕ ಸತೀಶ್ ಚತುರ್ವೇದಿ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ ಎಂದು ತಿಳಿಸಿದೆ.

2017ರಲ್ಲಿ ನಡೆದ ನಾಗ್ಪುರ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳ ಪರ ನಿಂತು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು. ಇದರಿಂದಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲುಂಟಾಯಿತು.

Satish Chaturvedi expelled from Congress for 'anti-party activities'

ಈ ಕುರಿತಂತೆ ಜನವರಿ 23ರಂದು ಸತೀಶ್ ಚತುರ್ವೇದಿ ಅವರಿಗೆ ಶೋಕಾಸ್ ನೋಟಿಸ್ ನೀಡಿ, ಈ ಬಗ್ಗೆ ಸ್ಪಷ್ಟನೆ ಕೋರಲಾಗಿತ್ತು. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಅವರ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಲಾಗಿದ್ದು, ಪಕ್ಷದಿಂದ ಉಚ್ಚಾಟಿಸಲಾಗಿದೆ.

English summary
Senior Congress leader Satish Chaturvedi was expelled from the party for anti-party activities on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X