ಹಾಜಿ ಅಲಿ ದರ್ಗಾಗೆ ಮಹಿಳೆಯರ ಪ್ರವೇಶ-ಸುಪ್ರೀಂ ಸಮ್ಮತಿ

Posted By:
Subscribe to Oneindia Kannada

ನವದೆಹಲಿ, ಅಕ್ಟೋಬರ್ 24: ಮುಂಬೈನ ಹಾಜಿ ಅಲಿ ದರ್ಗಾಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಬಾಂಬೆ ಹೈಕೋರ್ಟ್‌ ನೀಡಿದ್ದ ಐತಿಹಾಸಿಕ ತೀರ್ಪನ್ನು ಸುಪ್ರೀಂಕೋರ್ಟ್ ಸೋಮವಾರ(ಅಕ್ಟೋಬರ್ 24) ಎತ್ತಿ ಹಿಡಿದಿದೆ.

ಹಾಜಿ ಅಲಿ ದರ್ಗಾಕ್ಕೆ ಮಹಿಳೆಯರಿಗೆ ಪ್ರವೇಶ ನಿಷೇಧ ಹೇರಬೇಕು ಎಂದು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಾಜಿ ಅಲಿ ದರ್ಗಾ ಟ್ರಸ್ಟ್ ಮೇಲ್ಮನವಿ ಸಲ್ಲಿಸಿತ್ತು.

SC won't interfere with Bombay HC order allowing women into inner sanctum of Haji Ali Dargah

ಹಾಜಿ ಅಲಿ ದರ್ಗಾಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮಹಿಳೆಯ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ತೀರ್ಪು ಪ್ರಕಟಿಸಿತ್ತು. ಈ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್, ಈ ಬಗ್ಗೆ ಎರಡು ವಾರದೊಳಗೆ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದೆ.

ಪವಿತ್ರ ಗ್ರಂಥದಲ್ಲಿ ಉಲ್ಲೇಖಿಸಿರುವಂತೆ ಪುರುಷರು ಹಾಗೂ ಮಹಿಳೆಯರು 'ಇಬಾದತ್' ಮಾಡುವ ಮೂಲಕ ಸಮಾನತೆ ಕಾಯ್ದುಕೊಳ್ಳಲಾಗುತ್ತಿದೆ ಎನ್ನಲಾಗಿತ್ತು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿದ ಸುಪ್ರೀಂಕೋರ್ಟ್, ಬಾಂಬೆ ಹೈಕೋರ್ತ್ ಆದೇಶದ ಮಧ್ಯೆ ಪ್ರವೇಶಿಸುವುದಿಲ್ಲ ಎಂದಿದೆ.

2012ರ ಜೂನ್ ತಿಂಗಳಿನಲ್ಲಿ ಹಾಜಿ ಅಲಿ ಅವರು ಮಹಿಳೆಯರು ಪವಿತ್ರ ಸಮಾಧಿ ಸ್ಥಳಕ್ಕೆ ಪ್ರವೇಶಕ್ಕೆ ದರ್ಗಾ ಮಂಡಳಿ ನಿಷೇಧ ಹಾಕಿದ್ದರು, ಮಜರ್ ತನಕ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧವಿತ್ತು. ನಂತರ ದರ್ಗಾ ತನಕ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಸಂವಿಧಾನದ ಪರಿಚ್ಛೇದ 14 ಹಾಗೂ 25ರ ಅನ್ವಯ ಸಮಾನತೆ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಸೂಚಿಸಿತ್ತು.
(ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Supreme Court on Monday said that it will not interfere with the order of the Bombay High Court which had permitted the entry of women into the sanctum sanatorium of the Haji Ali Dargah at Mumbai. The Supreme Court passed this order after recording the submissions made by the Haji Ali Dargah Trust.
Please Wait while comments are loading...