ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರಾದ್ಯಂತ ಅಕ್ಟೋಬರ್ 4ರಿಂದ ಶಾಲೆಗಳು ಪುನರಾರಂಭ

|
Google Oneindia Kannada News

ಮುಂಬೈ, ಸೆಪ್ಟೆಂಬರ್ 24: ಮಹಾರಾಷ್ಟ್ರಾದ್ಯಂತ ಶಾಲೆಗಳು ಅಕ್ಟೋಬರ್ 4 ರಿಂದ ಪುನರಾರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಇಲ್ಲಿಯವರೆಗೆ ದೈಹಿಕ ತರಗತಿಗಳನ್ನು ನಡೆಸುತ್ತಿದ್ದ ಪ್ರದೇಶಗಳಲ್ಲಿ ಕಡಿಮೆ ಕೋವಿಡ್ -19 ಪ್ರಕರಣಗಳು ವರದಿ ಮಾಡಿವೆ.

ದೈಹಿಕ ತರಗತಿಗಳು ನಗರ ಪ್ರದೇಶಗಳಲ್ಲಿ 1 ರಿಂದ 7 ನೇ ತರಗತಿಗಳಿಗೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 1 ರಿಂದ 4 ನೇ ತರಗತಿಗಳನ್ನು ಇನ್ನೂ ಆರಂಭ ಮಾಡುವುದಿಲ್ಲ ಎಂದಿದ್ದಾರೆ.

"ಇಡೀ ರಾಜ್ಯದಲ್ಲಿ ಶಾಲೆಗಳು ಪುನರಾರಂಭಗೊಂಡರೂ ದೈಹಿಕ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಒತ್ತಾಯ ಇಲ್ಲ. ಅವರು ಹಾಜರಾಗಲು ಬಯಸಿದರೆ ಪೋಷಕರ ಒಪ್ಪಿಗೆ ಅಗತ್ಯ" ಎಂದು ಗಾಯಕ್ವಾಡ್ ಅವರು ಹೇಳಿದ್ದಾರೆ.

Schools To Reopen In Entire Maharashtra From October 4

"ಗ್ರಾಮೀಣ ಪ್ರದೇಶದಲ್ಲಿ 5 ರಿಂದ 12ನೇ ತರಗತಿಯವರೆಗೆ ದೈಹಿಕ ತರಗತಿಗಳನ್ನು ಪುನರಾರಂಭಿಸುತ್ತವೆ" ಎಂದು ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಅವರು ಹೇಳಿದ್ದಾರೆ.

ನಗರ ಪ್ರದೇಶಗಳಲ್ಲಿ 8 ರಿಂದ 12 ನೇ ತರಗತಿಯ ದೈಹಿಕ ತರಗತಿಗಳು ಆರಂಭವಾಗಲಿವೆ ಎಂದು ಅವರು ಸಚಿವರು ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯ ಪ್ರಕಾರ, ಶೇ. 70ಕ್ಕಿಂತ ಹೆಚ್ಚು ಪೋಷಕರು ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಒಲವು ತೋರಿದ್ದಾರೆ ಎಂದು ಗಾಯಕ್ವಾಡ್ ತಿಳಿಸಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 81.39 (81,39,33,785 ) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 4,23,43,720 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಇನ್ನು ಕೆಲವೇ ದಿನಗಳಲ್ಲಿ 85,92,550 ಲಕ್ಷ ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,382 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,00,162ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 32,542 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,28,48,273ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 15,65,696 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 55,99,32,709 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
Schools Would Reopen Across Maharashtra From October 4, The state Government Said On Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X