ಮುಂಬೈನಗರದಲ್ಲಿ ಕೋವಿಡ್ -19 ಹರಡುವಿಕೆ ತಡೆಯಲು ಹೊಸ ಅಸ್ತ್ರ
ಮುಂಬೈ, ಜುಲೈ 01 : ಭಾರತದಲ್ಲಿಯೇ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿನ ಪ್ರಕರಣ ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಅದರಲ್ಲೂ ಮುಂಬೈ ನಗರದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಇದನ್ನು ತಡೆಯಲು ಪೊಲೀಸರು ಮುಂದಾಗಿದ್ದಾರೆ.
Recommended Video
ಮುಂಬೈ ನಗರಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಪ್ರಣಯ್ ಅಶೋಕ್ ಆದೇಶ ಹೊರಡಿಸಿದ್ದಾರೆ. 1,74,761 ಕೊರೊನಾ ವೈರಸ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿದ್ದು, ಇವುಗಳಲ್ಲಿ 77,658 ಪ್ರಕರಣ ಮುಂಬೈ ನಗರದಲ್ಲಿದೆ.
ನಿಷೇಧಾಜ್ಞೆ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಂತಿಲ್ಲ. ಅಂಗಡಿ, ಧಾರ್ಮಿಕ ಕೇಂದ್ರ ಸೇರಿದಂತೆ ಯಾವುದೇ ಪ್ರದೇಶದಲ್ಲಿ ಒಬ್ಬರಿಗಿಂತ ಹೆಚ್ಚು ಜನರು ಗುಂಪು ಗೂಡುವಂತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂದು ಸೂಚನೆ ನೀಡಲಾಗಿದೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆ ಯಾರೂ ಸಹ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ಗಂಟೆಯ ತನಕ ನಗರದಲ್ಲಿ ಸಂಚಾರ ನಡೆಸುವಂತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಜುಲೈ 1ರಿಂದ 15ರ ತನಕ ಈ ಆದೇಶ ಜಾರಿಯಲ್ಲಿರಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಆಯಾ ವಲಯಗಳ ಡಿಸಿಪಿಗಳಿಗೆ ನಿಷೇಧಾಜ್ಞೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಹೊಣೆಯನ್ನು ನೀಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ 6 ಅಡಿ ಅಂತರವನ್ನು ಕಾಪಾಡಬೇಕು ಎಂದು ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.












Click it and Unblock the Notifications