Breaking; ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ

ಮುಂಬೈ, ಸೆಪ್ಟೆಂಬರ್ 08: ಕೇಂದ್ರ ಗೃಹ ಸಚಿವ, ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ ನಡೆದಿದೆ. ಸಂಸದರೊಬ್ಬರ ಪಿಎ ಹೆಸರಿನಲ್ಲಿ ಸಂಚಾರ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎರಡು ದಿನಗಳ ಮುಂಬೈ ಪ್ರವಾಸದಲ್ಲಿದ್ದ ಅಮಿತ್ ಶಾ ಬುಧವಾರ ಸಂಜೆ ತಮ್ಮ ಪ್ರವಾಸ ಪೂರ್ಣಗೊಳಿಸಿದ್ದಾರೆ. ಆದರೆ ವ್ಯಕ್ತಿಯೊಬ್ಬ ಸಂಸದರ ಆಪ್ತ ಸಹಾಯಕನ ಸೋಗಿನಲ್ಲಿ ಹಲವು ಗಂಟೆಗಳ ಕಾಲ ಅಮಿತ್ ಶಾ ಸುತ್ತ ಸಂಚಾರ ನಡೆಸಿದ್ದಾನೆ.

Security Lapse During Amit Shah Mumbai Visit Man Arrested

ವ್ಯಕ್ತಿಯ ವರ್ತನೆ ಬಗ್ಗೆ ಗೃಹ ಸಚಿವಾಲಯದ ಅಧಿಕಾರಿಗಳಿಗೆ ಅನುಮಾನ ಬಂದಿದೆ. ಅವರು ತಕ್ಷಣ ಈ ಕುರಿತು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ವ್ಯಕ್ತಿಯನ್ನು ಹೇಮಂತ್ ಪವಾರ್ ಎಂದು ಗುರುತಿಸಲಾಗಿದೆ. ಈತ ಮಹಾರಾಷ್ಟ್ರದ ದೂಲೆ ಜಿಲ್ಲೆಯ ನಿವಾಸಿ. ಆಂಧ್ರ ಪ್ರದೇಶದ ಸಂಸದರೊಬ್ಬರ ಪಿಎ ಎಂದು ಹೇಳಿಕೊಂಡು ಅಮಿತ್ ಶಾ ಸುತ್ತ ಸಂಚಾರ ನಡೆಸಿದ್ದ ಎಂಬ ಮಾಹಿತಿ ಲಭ್ಯವಾಗಿವೆ.

ಹೇಮಂತ್ ಪವಾರ್ ಗೃಹ ಸಚಿವಾಲಯದಿಂದ ನೀಡಿರುವ ಗುರುತಿನ ಚೀಟಿಯನ್ನು ಹೊಂದಿದ್ದು, ಅದನ್ನು ಕೊರಳಿಗೆ ಹಾಕಿಕೊಂಡು ಅಮಿತ್ ಶಾ ಸುತ್ತ ಸಂಚಾರ ನಡೆಸಿದ್ದಾನೆ. ಗೃಹ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ ಬಳಿಕ ಮುಂಬೈ ಪೊಲೀಸರು ಆತನ ವಿಚಾರಣೆ ನಡೆಸಿದ್ದಾರೆ. ಗುರುತಿನ ಚೀಟಿ ಸಹ ನಕಲಿ ಎಂಬ ಮಾಹಿತಿ ಸಿಕ್ಕಿದೆ.

ಮುಂಬೈ ಪೊಲೀಸರು ಹೇಮಂತ್ ಪವಾರ್ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಆತನನ್ನು ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಎರಡು ದಿನಗಳ ಮುಂಬೈ ಪ್ರವಾದ ವೇಳೆ ಹಲವು ಸಮಾರಂಭಗಳಲ್ಲಿ ಅಮಿತ್ ಶಾ ಪಾಲ್ಗೊಂಡಿದ್ದರು. ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಮಿತ್ ಶಾ ಮೊದಲ ಬಾರಿಗೆ ಮುಂಬೈ ಪ್ರವಾಸ ಕೈಗೊಂಡಿದ್ದರು.

ಅಮಿತ್ ಶಾ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿವಾಸ ಮತ್ತು ಉಪ ಮುಖ್ಯಮಂತ್ರಿ & ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ನಿವಾಸಕ್ಕೆ ಸಹ ಭೇಟಿಕೊಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+