ಶರದ್ ಪವಾರ್ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ, ಆರೋಗ್ಯ ಸ್ಥಿರ

ಮುಂಬೈ, ಏಪ್ರಿಲ್ 12: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಶರದ್‌ ಪವಾರ್‌ ಅವರನ್ನು ಭಾನುವಾರ ದಾಖಲಿಸಲಾಗಿತ್ತು. ಗ್ಯಾಲ್ ಬ್ಲಾಡರ್ ಸರ್ಜರಿ ನಡೆದಿದೆ. ಡಾ. ಬಲ್ಸಾರ್‌ ಅವರು ಯಶ್ವಸಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಪವಾರ್‌ ಅವರ ಆರೋಗ್ಯದ ಪರಿಸ್ಥಿತಿ ಸ್ಥಿರವಾಗಿದೆ ಎಂದು ಮಲಿಕ್‌ ಹೇಳಿದರು.

ಶಸ್ತ್ರ ಚಿಕಿತ್ಸೆ ನಂತರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ತಿಳಿಸಿದರು. ಪಿತ್ತಕೋಶದ ಸಮಸ್ಯೆ ಹಿನ್ನೆಲೆಯಲ್ಲಿ ಶರದ್ ಪವಾರ್ ಭಾನುವಾರವೇ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ತಿಂಗಳು ಮಾ.30ರಂದು ಅವರಿಗೆ ಎಂಡೊಸ್ಕೊಪಿ ನಡೆಸಿಪಿತ್ತಾಶ್ಮರಿಯನ್ನು ನಿವಾರಿಸಲಾಗಿತ್ತು.

 Sharad Pawar In Stable Health After Gall Bladder Surgery, Says Nawab Malik

ಪವಾರ್ ಅವರ ಆರೋಗ್ಯ ಸ್ಥಿತಿ ನೋಡಿಕೊಂಡು ಮುಂದಿನ 15 ದಿನಗಳಲ್ಲಿ ಮತ್ತೆ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಎಂದು ವೈದ್ಯರು ಹೇಳಿದ್ದರು ಅದರಂತೆ ಇಂದು ಶಸ್ತ್ರಚಿಕಿತ್ಸೆ ನಡೆದಿದ್ದು, ಪವಾರ್ ಆರೋಗ್ಯ ಸ್ಥಿರವಾಗಿದ್ದು, ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+