ಸಿಡುಕು ಬಿಟ್ಟು ಸರ್ಕಾರ ರಚಿಸಿ; ಮಹಾ ಸಿಎಂ ಕೊಟ್ಟೇ ಬಿಟ್ರು ರಾಜೀನಾಮೆ!
ಮುಂಬೈ, ನವೆಂಬರ್.08: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಅಂತಾರೆ. ಆದರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಂದಿದ್ದೇ ಬಂದಿದ್ದು. ಇಲ್ಲಿ ಪ್ರಭುಗಳು ಯಾರು ಅನ್ನೋದೇ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ. ಮಹಾರಾಷ್ಟ್ರದಲ್ಲಿ ರಾಜಕೀಯ ಚಿತ್ರಣವನ್ನು ನೋಡುತ್ತಿದ್ದರೆ, ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವ ಗಾದೆಮಾತು ನೆನಪಿಗೆ ಬರುತ್ತದೆ.
ಕೇಂದ್ರದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಬಿಜೆಪಿ ಹಾಗೂ ಶಿವಸೇನೆ ಪಕ್ಷಗಳು ಮಹಾರಾಷ್ಟ್ರದಲ್ಲಿ ಗದ್ದುಗೆ ಹಿಡಿಯಲು ಗುದ್ದಾಡುತ್ತಿವೆ. ಉಭಯ ಪಕ್ಷಗಳ ನಡುವಿನ ಕಿತ್ತಾಟಕ್ಕೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕಿಡಿ ಕಾರಿದ್ದಾರೆ. ಬಿಜೆಪಿ ಹಾಗೂ ಶಿವಸೇನೆ ಪಕ್ಷಗಳು ಒಂದಾಗಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಹಾಗೂ ಶಿವಸೇನೆ ಪರ ಪ್ರಜೆಗಳು ತೀರ್ಪು ನೀಡಿದ್ದಾರೆ. ಉಭಯ ಪಕ್ಷದ ನಾಯಕರು ಇನ್ನು ತಡ ಮಾಡುವುದು ಉತ್ತಮವಲ್ಲ. ಎರಡು ಪಕ್ಷದ ನಾಯಕರು ಈ ನಿಟ್ಟಿನಲ್ಲಿ ಒಂದಾಗಬೇಕು. ರಾಜ್ಯದಲ್ಲಿ ಸರ್ಕಾರವನ್ನು ರಚಿಸಿ ಸುಭದ್ರ ಆಡಳಿತವನ್ನು ನೀಡಬೇಕು ಎಂದು ಶರದ್ ಪವಾರ್ ಮಾಧ್ಯಮಗಳ ಮೂಲಕ ತಿಳಿಸಿದರು.
ಸರ್ಕಾರ ರಚನೆಯಲ್ಲಿ ವಿಳಂಬ ತೋರಿದರೆ ರಾಜ್ಯದ ಆರ್ಥಿಕತೆ ಮೇಲೆ ಹೊಡೆತ ಬೀಳಲಿದೆ. ಈಗಾಗಲೆ ಭಾರಿ, ಅತಿವೃಷ್ಠಿ, ನೆರೆ ಪರಿಸ್ಥಿತಿಯಿಂದ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಹೀಗಿರುವಾಗ ಸರ್ಕಾರ ರಚಿಸುವಲ್ಲಿ ವಿಳಂಬ ಧೋರಣೆ ತೋರುವುದು ಸರಿಯಲ್ಲ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ 56 ಸ್ಥಾನಗಳನ್ನು ಪಡೆದುಕೊಂಡಿದೆ. 105 ಸ್ಥಾನಗಳನ್ನು ಗೆದ್ದಿರುವ ಭಾರತೀಯ ಜನತಾ ಪಕ್ಷ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕೇಂದ್ರದಲ್ಲಿ ಒಂದಾಗಿರುವ ಬಿಜೆಪಿ-ಶಿವಸೇನೆ ಪಕ್ಷಗಳು ರಾಜ್ಯದಲ್ಲೂ ಹೊಂದಾಣಿಕೆಯಿಂದ ಸರ್ಕಾರವನ್ನು ರಚಿಸಬೇಕು ಎಂದು ಸಲಹೆ ನೀಡಿದ್ದಾರೆ.

'ಶಿವಸೇನೆಗೆ ಎನ್ ಸಿಪಿ ಬೆಂಬಲಿಸಿದ ಮಾತ್ರಕ್ಕೆ ಸರ್ಕಾರ ರಚನೆ ಸಾಧ್ಯವಿಲ್ಲ'
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜೆಗಳು ತೀರ್ಪು ಕೊಟ್ಟಾಗಿದೆ. 56 ಸ್ಥಾನಗಳನ್ನು ಪಡೆದ ಶಿವಸೇನೆಗೆ ಎನ್ ಸಿಪಿ ಬೆಂಬಲಿಸಿದ ಮಾತ್ರಕ್ಕೆ ಸರ್ಕಾರ ರಚಿಸಲು ಸಾಧ್ಯವಾಗದು. ಎನ್ ಸಿಪಿ ಒಂದು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಂಡು ಕೆಲಸ ಮಾಡಲು ಇಚ್ಛಿಸುತ್ತದೆ. ಶಿವಸೇನೆಗೆ ಬೆಂಬಲಿಸಿ ಸರ್ಕಾರ ರಚನೆಗೆ ಮುಂದಾಗುವ ಮಾತೇ ಇಲ್ಲ ಎಂದು ಶರದ್ ಪವಾರ್ ತಿಳಿಸಿದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮೊದಲೇ ಬಿಜೆಪಿ-ಶಿವಸೇನೆ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಮೊದಲೇ ಊಹಿಸಿದಂತೆ ಉಭಯ ಪಕ್ಷಗಳಿಗೆ ಮತದಾರರು ಬಹುಮತ ನೀಡಿದ್ದಾರೆ. ಆದರೆ, ಪ್ರಜೆಗಳ ತೀರ್ಪನ್ನು ಪ್ರತಿನಿಧಿಗಳು ಇಲ್ಲಿ ಒಪ್ಪಿಕೊಳ್ಳುತ್ತಿಲ್ಲ. ಎರಡು ಪಕ್ಷಗಳ ನಡುವಿನ ಅಧಿಕಾರದ ಹಗ್ಗಜಗ್ಗಾಟ ತಾರಕಕ್ಕೆ ಹೋಗಿದೆ. ಶಿವಸೇನೆಯ ಹಠಕ್ಕೆ ಬಿಜೆಪಿ ರೋಸಿ ಹೋಗಿದೆ. ಈಗಾಗಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications