ಸಾಮ್ನಾದಲ್ಲಿ ಹಳೇ ದೋಸ್ತಿ ಬಿಜೆಪಿ ವಿರುದ್ಧ ಶಿವಸೇನೆ ಗಂಭೀರ ಆರೋಪ
ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆಗಿನ ದೋಸ್ತಿ ಕಡಿದುಕೊಂಡಿರುವ ಶಿವಸೇನೆ ವಾಗ್ಧಾಳಿಯನ್ನು ಮುಂದುವರೆಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ಗಂಭೀರ ಆರೋಪವನ್ನು ಮಾಡಿದೆ.ಬಿಜೆಪಿ ಕುದುರೆ ವ್ಯಾಪಾರ ಮಾಡಿ ಅಧಿಕಾರ ಹಿಡಿಯುವ ಯತ್ನದಲ್ಲಿದೆ ಎಂದು ಬರೆದುಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ವಿರುದ್ಧ ಶಿವಸೇನೆ ಸಾಮ್ನಾದ ಸಂಪಾದಕೀಯದಲ್ಲಿ ಹರಿಹಾಯ್ದಿದೆ.
ರಾಷ್ಟ್ರಪತಿ ಆಳ್ವಿಕೆ ಹೇರಿಕೆಯ ಸೋಗಿನಲ್ಲಿ ಕುದುರೆ ವ್ಯಾಪಾರದ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪವನ್ನು ಬಿಜೆಪಿ ಮಾಡಿದೆ. ಸ್ವತಃ ಬಿಜೆಪಿ ನಾಯಕರೇ ಸರ್ಕಾರ ರಚನೆಗೆ ಸಾಕಾಗುವಷ್ಟು ಸಂಖ್ಯೆಯನ್ನು ಹೊಂದಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಬಿಜೆಪಿ ಬಳಿ 14 ಪಕ್ಷೇತರರು ಸೇರಿ 119 ಸದಸ್ಯರು ಮಾತ್ರವೇ ಇದ್ದಾರೆ ಎಂದು ನೆನಪಿಸಿದೆ.
ಇದಕ್ಕೂ ಮುನ್ನ ಪಿಜೆಪಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ಕ್ರಿಕೆಟ್‌ಗೆ ಹೋಲಿಸಿದ್ದರು. ರಾಜಕೀಯ ಮತ್ತು ಕ್ರಿಕೆಟ್‌ನಲ್ಲಿ ಯಾವುದೇ ಕ್ಷಣದಲ್ಲಿ ಏನು ಬೇಕಾದರು ಸಂಭವಿಸಿಬಹುದು ಎಂಬ ಹೇಳಿಕೆಯನ್ನು ನೀಡಿದ್ದರು.

ಮತ್ತೊಂದೆಡೆ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಮುಖಂಡ ಶರದ್ ಪವಾರ್ ಚರ್ಚೆಯನ್ನು ನಡೆಸಲಿದ್ದಾರೆ. ಅಜ್ಞಾತ ಸ್ಥಳದಲ್ಲಿ ಇಬ್ಬರೂ ಮುಖಂಡರ ಭೇಟಿಯಾಗಿ ಸರ್ಕಾರ ರಚನೆ ಕುರಿತಾಗಿ ಮಾತುಕತೆ ನಡೆಸಲಿದ್ದಾರೆ. ನಾಳೆ(ಭಾನುವಾರ) ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಈ ಇಬ್ಬರೂ ನಾಯಕರು ಭೇಟಿಯಾಗಲಿದ್ದಾರೆ. ನಾಳಿನ ಭೇಟಿಯಲ್ಲಿ ಮೈತ್ರಿ ಸರ್ಕಾರ ರಚನೆ ವಿಚಾರವಾಗಿ ಮಹತ್ವದ ನಿರ್ಧಾರವನ್ನು ಈ ನಾಯಕರು ತೆಗೆದುಕೊಳ್ಳಲಿದ್ದಾರೆ.












Click it and Unblock the Notifications