ಮಹಾರಾಷ್ಟ್ರದಲ್ಲಿ ಮೈತ್ರಿ ಸುಗಮ... ಶಿವಸೇನೆಗೆ ಡಿಸಿಎಂ ಪೋಸ್ಟ್ ಪಕ್ಕಾ!
ನವದೆಹಲಿ, ಸೆಪ್ಟೆಂಬರ್ 26: ಮಹಾರಾಷ್ಟ್ರದಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮುಂದುವರಿಯುವುದು ಖಚಿತವಾಗಿದೆ. ಉಭಯ ಪಕ್ಷದ ಮುಖಂಡರೂ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಒಮ್ಮತಕ್ಕೆ ಬಂದಿದ್ದು, ಬಿಜೆಪಿ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ 144, ಶಿವಸೇನೆ 126 ಮತ್ತು ಇತರ ಸಣ್ಣ ಪುಟ್ಟ ಮೈತ್ರಿಪಕ್ಷಗಳು 18 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ.
ಜೊತೆಗೆ ಬಿಜೆಪಿ-ಶಿವಸೇನೆ ಮೈತ್ರಿ ಪಕ್ಷ ಚುನಾವಣೆಯಲ್ಲಿ ಗೆದ್ದು, ಬಹುಮತ ಪಡೆದರೆ ಶಿವಸೇನೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಕ್ಕೂ ಬಿಜೆಪಿ ಒಪ್ಪಿಕೊಂಡಿದೆ ಎನ್ನಲಾಗಿದೆ.
Recommended Video

2014 ರಲ್ಲೂ ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಷಯದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಶಿವಸೇನೆ ಸ್ತಂತ್ರವಾಗಿ ಸ್ಪರ್ಧಿಸಿತ್ತು. ಆ ನಂತರ ಬಿಜೆಪಿ 122(288), ಶಿವಸೇನೆ 63 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಕೆಲವು ತಿಂಗಳ ನಂತರ ಉಭಯ ಪಕ್ಷಗಳೂ ಮೈತ್ರಿ ಮಾಡಿಕೊಂಡಿದ್ದವು. ಈ ಬಾರಿ ಮಹಾರಾಷ್ಟ್ರದಲ್ಲಿ ಅಕ್ಟೋಬರ್ 21 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಅ.24 ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications