ಶನಿವಾರ ರಾಜ್ಯಪಾಲರಿಗೆ ಪತ್ರ ನೀಡಲಿರುವ ಶಿವಸೇನೆ-ಕಾಂಗ್ರೆಸ್-NCP
ಮುಂಬೈ, ನವೆಂಬರ್ 21: ಇದೇ ವಾರಾಂತ್ಯದಲ್ಲಿ ಮಹಾರಾಷ್ಟ್ರದ ಸರ್ಕಾರ ರಚನೆಯ ಪ್ರಹಸನಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.
Recommended Video
ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಸೇರಿ ರಾಜ್ಯಪಾಲರನ್ನು ಭೇಟಿ ಮಾಡಿ ಪತ್ರ ನೀಡಲು ನಿರ್ಧರಿಸಿವೆ. ಗುರುವಾರ ದೆಹಲಿಯಲ್ಲಿ ನಡೆದ ಸರಣಿ ಸಭೆಯ ನಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆಯೂ ನಡೆದಿದ್ದು, ಸಭೆಯ ನಂಗತರ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್, "ಶುಕ್ರವಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ" ಎಂದಿದ್ದಾರೆ.

"ಮಹಾರಾಷ್ಟ್ರದಲ್ಲಿ ಶಿವಸೇನೆಯನ್ನು ಹೊರಗಿಟ್ಟು ಸರ್ಕಾರ ರಚಿಸುವುದಕ್ಕಂತೂ ಸಾಧ್ಯವಿಲ್ಲ. ಆದ್ದರಿಂದ ನಮ್ಮ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡು ಒಂದಾಗಿ ಹೆಜ್ಜೆ ಇಡಬೇಕಾಗುತ್ತದೆ" ಎಂದು ಎನ್ ಸಿಪಿ ನಾಯಕ ನವಾಬ್ ಮಲೀಕ್ ಹೇಳಿದ್ದಾರೆ.
ಮೂರು ಪಕ್ಷಗಳೂ ಒಂದಾಗಿ ಸರ್ಕಾರ ರಚಿಸಲು ಸಿದ್ಧವಿವೆ. ಆದರೆ ಅಧಿಕಾರ ಹಂಚಿಕೆಯ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.












Click it and Unblock the Notifications