ತೈಲ ಬೆಲೆ ಹೆಚ್ಚಳ ವಿರುದ್ಧ ಮಹಾರಾಷ್ಟ್ರದಲ್ಲಿ ಶಿವಸೇನೆ ಪ್ರತಿಭಟನೆ
ಮುಂಬೈ,ಫೆಬ್ರವರಿ 05: ತೈಲ ಬೆಲೆಯನ್ನು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮೊದಲ ಬಾರಿಗೆ ಪ್ರತಿಭಟನೆ ನಡೆಸಿದ್ದೇವೆ.ಒಂದು ವೇಳೆ ಕೇಂದ್ರ ಸರ್ಕಾರ ನಮ್ಮ ಮಾತನ್ನು ಕೇಳದಿದ್ದಲಿ ಮತ್ತೊಂದು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಈ ಮಧ್ಯೆ ಕೋವಿಡ್-19 ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ತೈಲ ಉತ್ಪಾದನೆ ಕುಂಠಿತವಾಗಿದ್ದರಿಂದ ಅದರ ಬೆಲೆ ಅಧಿಕವಾಗಿರುವುದಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಖಾತೆ ಸಚಿವಾಲಯ ಹೇಳಿದೆ.

ತೈಲ ಬೆಲೆಯಂತಹ ಅನ್ಯಾಯವನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿರುವುದಾಗಿ ಮಹಾರಾಷ್ಟ್ರ ಸಾರಿಗೆ ಸಚಿವ ಹಾಗೂ ಶಿವಸೇನಾ ಹಿರಿಯ ಮುಖಂಡ ಅನಿಲ್ ಪರಬ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ತೈಲ ಬೆಲೆ ಏರಿಕೆ ವಿರುದ್ಧ ಗ್ಯಾಸ್ ಸಿಲಿಂಡರ್ ನ್ನು ತಲೆ ಮೇಲೆ ಹೊತ್ತು ಪ್ರತಿಭಟಿಸಿದ ಪ್ರತಿಭಟನಾಕಾರರು, ಎತ್ತಿನ ಗಾಡಿ ಹಾಗೂ ಸೈಕಲ್ ಮೆರವಣಿಗೆ ನಡೆಸಿದರು. ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಸಿದ ಶಿವಸೇನಾ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications