ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂನಲ್ಲಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ; 5 ಸಂಗತಿಗಳು

|
Google Oneindia Kannada News

ಮುಂಬೈ, ಜೂನ್ 22; ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಅಸ್ಸಾಂಗೆ ಸ್ಥಳಾಂತರಗೊಂಡಿದೆ. ಶಿವಸೇನೆಯ ಪ್ರಭಾವಿ ನಾಯಕ ಏಕನಾಥ ಶಿಂಧೆ ನೇತೃತ್ವದಲ್ಲಿ ಶಾಸಕರು ಸೂರತ್‌ನಿಂದ ಗುವಾಹಟಿಯ ಖಾಸಗಿ ಹೋಟೆಲ್‌ ತಲುಪಿದ್ದಾರೆ.

Recommended Video

ಮಹಾಸರ್ಕಾರಕ್ಕೆ ಸಿಡಿಲು ಬಡಿದಿರುವಾಗ್ಲೇ CM Uddhav Thackeray ಗೆ ಕೊರೊನಾ | *Politics | OneIndia Kannada

ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದ ವಿರುದ್ಧ ಶಾಸಕರು ಬಂಡಾಯದ ಬಾವುಟ ಹಾರಿಸಿದ್ದಾರೆ.

Maharashtra Political Crisis : ಠಾಕ್ರೆ ಸರ್ಕಾರಕ್ಕೆ ಮಗ್ಗಲು ಮುಳ್ಳಾಗಿದ್ದು ಹೇಗೆ ಏಕನಾಥ್ ಶಿಂಧೆ? Maharashtra Political Crisis : ಠಾಕ್ರೆ ಸರ್ಕಾರಕ್ಕೆ ಮಗ್ಗಲು ಮುಳ್ಳಾಗಿದ್ದು ಹೇಗೆ ಏಕನಾಥ್ ಶಿಂಧೆ?

ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಶಾಸಕರು, 7 ಪಕ್ಷೇತರ ಶಾಸಕರು ಬಂಡಾಯ ಎದ್ದಿದ್ದಾರೆ. ಸೂರತ್‌ನ ಹೋಟೆಲ್‌ನಲ್ಲಿದ್ದ ಏಕನಾಥ ಶಿಂಧೆ ಶಿವಸೇನೆಯ 55 ಶಾಸಕರಲ್ಲಿ 40 ಶಾಸಕರ ಬೆಂಬಲ ತಮಗೆ ಇದೆ ಎಂದು ಘೋಷಣೆ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಬಂಡಾಯ ಬಾವುಟ ಹಾರಿಸಿದ ಏಕನಾಥ್ ಶಿಂಧೆ ಜೊತೆ 26 ಶಾಸಕರುಮಹಾರಾಷ್ಟ್ರದಲ್ಲಿ ಬಂಡಾಯ ಬಾವುಟ ಹಾರಿಸಿದ ಏಕನಾಥ್ ಶಿಂಧೆ ಜೊತೆ 26 ಶಾಸಕರು

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ಮುಂದುವರೆಸಿದ್ದಾರೆ. ಮಂಗಳವಾರ ಅವರು ತಮ್ಮ ನಿವಾಸದಲ್ಲಿ ಶಿವಸೇನೆ ಶಾಸಕರ ಸಭೆ ನಡೆಸಿದರು. ಸಭೆ ಬಳಿಕ ಶಾಸಕರನ್ನು ಮುಂಬೈನ ಖಾಸಗಿ ಹೋಟೆಲ್‌ಗೆ ಕಳಿಸಿದ್ದಾರೆ. ಈ ಮೂಲಕ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಏಕನಾಥ ಯಾರು?ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಏಕನಾಥ ಯಾರು?

ಸಂಗತಿ 01; ಬಿಜೆಪಿ ಜೊತೆ ಸರ್ಕಾರ ರಚನೆ ಮಾಡಬೇಕು

ಸಂಗತಿ 01; ಬಿಜೆಪಿ ಜೊತೆ ಸರ್ಕಾರ ರಚನೆ ಮಾಡಬೇಕು

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಮೈತ್ರಿ ಸರ್ಕಾರದಲ್ಲಿ ಶಿವಸೇನೆಯಲ್ಲಿ 55 ಶಾಸಕರಿದ್ದಾರೆ. ತಮಗೆ 40 ಶಾಸಕರ ಬೆಂಬಲವಿದೆ ಎಂದು ಏಕನಾಥ ಶಿಂಧೆ ಘೋಷಣೆ ಮಾಡಿದ್ದಾರೆ. 7 ಪಕ್ಷೇತರ ಶಾಸಕರು ಸಹ ಏಕನಾಥ ಶಿಂಧೆ ಜೊತೆಗಿದ್ದಾರೆ.

ಶಿವಸೇನೆ ಬಿಜೆಪಿ ಜೊತೆ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಬೇಕು ಎಂಬುದು ಬಂಡಾಯ ಎದ್ದಿರುವ ಶಾಸಕರ ಪ್ರಮುಖ ಬೇಡಿಕೆ ಎಂಬ ಸುದ್ದಿಗಳು ಹಬ್ಬಿವೆ. ಬಿಜೆಪಿ ರಾಜ್ಯದ ಮೈತ್ರಿ ಸರ್ಕಾರ ಪತನಗೊಳಿಸಲು ಪ್ರಯತ್ನ ನಡೆಸಿದೆ ಎಂಬುದು ವಿರೋಧ ಪಕ್ಷಗಳ ಆರೋಪವಾಗಿದೆ.

ಸಂಗತಿ 02; ಬಾಳ ಸಾಹೇಬ್ ಠಾಕ್ರೆಯ ಶಿವಸೇನೆ

ಸಂಗತಿ 02; ಬಾಳ ಸಾಹೇಬ್ ಠಾಕ್ರೆಯ ಶಿವಸೇನೆ

ಸೂರತ್‌ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಏಕನಾಥ ಶಿಂಧೆ ಮತ್ತು ಇತರ ಶಾಸಕರು ಬುಧವಾರ ಅಸ್ಸಾಂನ ಗುವಾಹಟಿ ತಲುಪಿದರು. ಸೂರತ್ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಏಕನಾಥ ಶಿಂಧೆ, "ನಾವು ಬಾಳ ಸಾಹೇಬ್ ಠಾಕ್ರೆಯ ಶಿವಸೇನೆ ತೊರೆದಿಲ್ಲ. ಠಾಕ್ರೆಯ ಹಿಂದುತ್ವವನ್ನು ನಾವು ಪಾಲಿಸುತ್ತಿದ್ದೇವೆ. ಮುಂದೆಯೂ ಸಹ ಪಾಲಿಸುತ್ತೇವೆ" ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಮಧ್ಯಾಹ್ನ 1 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದಿನ ರಾಜಕೀಯ ನಡೆ ಬಗ್ಗೆ ಮುಖ್ಯಮಂತ್ರಿಗಳು ಸಚಿವರ ಜೊತೆ ಮಹತ್ವದ ಚರ್ಚೆ ನಡೆಸುವ ನಿರೀಕ್ಷೆ ಇದೆ.

ಸಂಗತಿ 3; ಮಂಗಳವಾರದ ಮಾತುಕತೆ ವಿಫಲ

ಸಂಗತಿ 3; ಮಂಗಳವಾರದ ಮಾತುಕತೆ ವಿಫಲ

ಮಂಗಳವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಕನಾಥ ಶಿಂಧೆ ಜೊತೆ ದೂರವಾಣಿ ಮೂಲಕ ಮಾತಕತೆ ನಡೆಸಿದರು. ತಮ್ಮ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು ಮತ್ತು ಪಕ್ಷಕ್ಕೆ ವಾಪಸ್ ಆಗಬೇಕು ಎಂದು ಮನವಿ ಮಾಡಿದರು. ಆದರೆ ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಬೇಕು ಎಂಬ ಪ್ರಸ್ತಾವನೆಯನ್ನು ಉದ್ಧವ್ ಠಾಕ್ರೆ ತಳ್ಳಿಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸೂರತ್‌ನ ಹೋಟೆಲ್‌ನಲ್ಲಿ ಹಲವಾರು ಬಿಜೆಪಿ ನಾಯಕರು ಏಕನಾಥ ಶಿಂಧೆ ಮತ್ತು ಇತರ ಶಾಸಕರನ್ನು ಭೇಟಿಯಾಗಿದ್ದಾರೆ. ಬುಧವಾರ ಸಂಜೆಯ ವೇಳೆಗೆ ಮಹಾರಾಷ್ಟ್ರ ರಾಜಕೀಯದ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.

ಸಂಗತಿ 4; ರಾಜಕೀಯ ಹೈಡ್ರಾಮ

ಸಂಗತಿ 4; ರಾಜಕೀಯ ಹೈಡ್ರಾಮ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರಕ್ಕೆ ಎನ್‌ಸಿಪಿ ಬೆಂಬಲ ನೀಡಿದೆ. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯೆ ನೀಡಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, "ಇದು ಶಿವಸೇನೆ ಪಕ್ಷದ ಆತಂರಿಕ ವಿಚಾರ" ಎಂದು ಹೇಳಿದರು. "ಶಿವಸೇನೆ ಸರ್ಕಾರಕ್ಕೆ ಬೆಂಬಲ ಕೊಡುವ ವಿಚಾರದಲ್ಲಿ ಪಕ್ಷ ಸಂಪೂರ್ಣ ಬದ್ಧವಾಗಿದೆ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂಗತಿ 5; ರಾಜಕೀಯ ಹೈಡ್ರಾಮ

ಸಂಗತಿ 5; ರಾಜಕೀಯ ಹೈಡ್ರಾಮ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಕನಾಥ ಶಿಂಧೆ ಜೊತೆ ಮಾತುಕತೆ ನಡೆಸಿದ ಬಳಿಕ ಸೂರತ್‌ನ ಹೋಟೆಲ್‌ನಿಂದ ಗುವಾಹಟಿಗೆ ಸ್ಥಳಾಂತರಗೊಳ್ಳುವ ತೀರ್ಮಾನ ಕೈಗೊಳ್ಳಲಾಯಿತು ಎಂಬ ಮಾಹಿತಿ ಇದೆ. ಈ ಮೂಲಕ ಮಹಾರಾಷ್ಟ್ರದ ರಾಜಕೀಯ ಹೈಡ್ರಾಮ ಬಿಜೆಪಿ ಆಡಳಿತ ಇರುವ ಮತ್ತೊಂದು ರಾಜ್ಯ ಅಸ್ಸಾಂಗೆ ಸ್ಥಳಾಂತರಗೊಂಡಿದೆ.

ಏಕನಾಥ ಶಿಂಧೆ ಹೋಟೆಲ್‌ನಲ್ಲಿ ಶಾಸಕರ ಜೊತೆ ಸಭೆ ನಡೆಸಿ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

English summary
Maharashtra chief minister Uddhav Thackeray government on trouble. Shiv Sena rebel leader Eknath Shinde in Assam with MLA's. Here are the 5 points.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X