ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಸೇನಾ-ಎನ್‌ಸಿಪಿ ಭೇಟಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ

|
Google Oneindia Kannada News

ಮುಂಬೈ, ಮೇ 26: ಕೊರೊನಾ ವೈರಸ್ ನಿಯಂತ್ರಿಸುವ ವಿಚಾರದಲ್ಲಿ ಮಹಾರಾಷ್ಟ್ರ ನಿಯಂತ್ರಣ ತಪ್ಪಿದೆ. ಪರಿಸ್ಥಿತಿಯನ್ನು ಠಾಕ್ರೆ ಸರ್ಕಾರ ಸರಿಯಾಗಿ ನಿಭಾಯಿಸುತ್ತಿಲ್ಲ. ಬಹುಶಃ ಮಹಾ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಬಹುದು ಎಂಬ ಮಾತುಗಳು ಕೇಳಿಬರುತ್ತಿದೆ.

Recommended Video

ಇಂದು ಮಹಾರಾಷ್ತ್ರ ಸಚಿವ ಸಂಪುಟ ವಿಸ್ತರಣೆ | Oneindia Kannada

ಆದರೆ, ಮಹಾರಾಷ್ಟ್ರದಲ್ಲಿ ಯಾವ ಕಾರಣಕ್ಕೂ ರಾಷ್ಟ್ರಪತಿ ಆಡಳಿತ ಬರುವ ಸಾಧ್ಯತೆಯೇ ಇಲ್ಲ. ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ. ಸುಭದ್ರವಾಗಿ ಸರ್ಕಾರ ಪೂರ್ಣಾವಧಿ ಮುಗಿಸಲಿದೆ ಎಂದು ಶಿವಸೇನಾ ಹಿರಿಯ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರ ಹಾಟ್ ಸ್ಪಾಟ್, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?ಮಹಾರಾಷ್ಟ್ರ ಹಾಟ್ ಸ್ಪಾಟ್, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನಿನ್ನೆಯಷ್ಟೆ ಮಹಾರಾಷ್ಟ್ರ ಸಿಎಂ ಮತ್ತು ಎನ್‌ಸಿಪಿ ಪಕ್ಷದ ಅಧ್ಯಕ್ಷ ಶರದ್ ಪವರ್ ಹಾಗೂ ಶಿವಸೇನಾ ಹಿರಿಯ ನಾಯಕ ಸಂಜಯ್ ರಾವತ್ ಭೇಟಿ ಮಾಡಿ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಸುಮಾರು ಒಂದೂವರೆ ಗಂಟೆಗೂ ಅಧಿಕ ಸಮಯ ಮಾತುಕತೆ ನಡೆದಿದ್ದು, ಈ ವೇಳೆ ರಾಷ್ಟ್ರಪತಿ ಆಡಳಿತ ಬಗ್ಗೆ ಯಾವ ಚರ್ಚೆಯೂ ಆಗಿಲ್ಲ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ.

Shivasena Says Maharashtra Govt Is Strong

ಕೇಂದ್ರ ಸರ್ಕಾರದ ಜೊತೆಯೂ ನಾವು ಸಂಪರ್ಕದಲ್ಲಿದ್ದೇವೆ. ನಿತಿನ್ ಗಡ್ಕರಿ ಹಾಗೂ ಅಮಿತ್ ಶಾ ಅವರಿಂದಲೂ ಈ ಬಗ್ಗೆ ಮಾತುಕತೆ ಆಗಿಲ್ಲ. ಆದರೂ ಇಂತಹ ಸುದ್ದಿಗಳು ಹೇಗೆ ಹರಿದಾಡುತ್ತಿದೆ ಎಂದು ಸಂಜಯ್ ರಾವತ್ ಪ್ರಶ್ನಿಸಿದ್ದರು.

ಕಾಂಗ್ರೆಸ್, ಶಿವಸೇನಾ ಮತ್ತು ಎನ್‌ಸಿಪಿ ಪಕ್ಷಗಳು ಸೇರಿ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ರಚಿಸಿದೆ. ಸಿಎಂ ಉದ್ಧವ್ ಠಾಕ್ರೆ ಇತ್ತೀಚಿಗಷ್ಟೆ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

English summary
Maharashtra Govt Is Strong, Uddhav Thackeray will complete full time as a CM for state said Shiv Sena senior leader Sanjay Raut.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X