ಲತಾ ಮಂಗೇಶ್ಕರ್ ಅಸ್ವಸ್ಥ, ಬ್ರೀಚ್ ಕ್ಯಾಂಡಿ ಆಸ್ಪತ್ರೆ ದಾಖಲು
ಮುಂಬೈ, ನವೆಂಬರ್ 11: ಭಾರತರತ್ನ ಲತಾ ಮಂಗೇಶ್ಕರ್ ಅವರು ತೀವ್ರ ಅಸ್ವಸ್ಥರಾಗಿದ್ದು, ಸೋಮವಾರ ಬೆಳಗ್ಗೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲತಾ ಅವರಿಗೆ ಉಸಿರಾಟದಲ್ಲಿ ತೊಂದರೆ ಉಂಟಾಗಿದ್ದರಿಂದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೆಪ್ಟೆಂಬರ್ 28ರಂದು 90 ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಗಾನ ಕೋಗಿಲೆ ಅವರ ಅನಾರೋಗ್ಯದ ಬಗ್ಗೆ ತಿಳಿದು ಅಭಿಮಾನಿಗಳು ಆತಂಕಗೊಂಡಿದ್ದಾರೆ.

ಹಿಂದಿ ಸೇರಿದಂತೆ 36 ಭಾಷೆಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಭಾರತದ ಅತ್ಯಂತ ಜನಪ್ರಿಯ ಗಾಯಕಿ ಎನಿಸಿಕೊಂಡಿರುವ ಮಂಗೇಶ್ಕರ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಫ್ರಾನ್ಸಿನ ಅತ್ಯುನ್ನತ ನಾಗರಿಕ ಪ್ರಶಸ್ತಿ ಕೂಡಾ ಲಭಿಸಿದೆ.
ಪ್ಯಾರ್ ಕಿಯಾ ತೋ ಡರ್ನಾ ಕ್ಯಾ, ಅಜೀಬ್ ದಸ್ತಾ ಹೈ ಯೇ, ರಂಗೀಲಾ ರೇ, ಜಿಯಾ ಜಲೇ ಸೇರಿದಂತೆ ಅನೇಕ ಜನಪ್ರಿಯ ಹಾಡುಗಳಿಗೆ ದನಿ ನೀಡಿದ್ದಾರೆ.












Click it and Unblock the Notifications