ಲೈಂಗಿಕ ಕಿರುಕುಳದ ಆರೋಪದ ಮೇಲೆ ಗಾಯಕ ಯಶ್ ಬಂಧನ
ಮುಂಬೈ, ಆಗಸ್ಟ್ 04: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗಾಯಕ ಯಶ್ ವಾಡಲಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಗೊರೆಗಾಂವ್ ಪಶ್ಚಿಮದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಮಹಿಳೆ ಜತೆ ಯಶ್ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರದಂದು ಯಶ್ ವಿರುದ್ಧ 39 ವರ್ಷ ವಯಸ್ಸಿನ ಮಹಿಳೆಯೊಬ್ಬರು ಬನಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿ ಯಶ್ ವಿರುದ್ಧ ಐಪಿಸಿ ಸೆಕ್ಷನ್ 354 ಹಾಗೂ 504ರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುವಾರ ರಾತ್ರಿ ವೇಳೆ ಓಶಿವಾರಯ ಲಾಂಜ್ ನಲ್ಲಿ ಹಾಡುತ್ತಿದ್ದ ಯಶ್ ರನ್ನು ಅಲ್ಲಿಂದಲ್ಲೇ ಬಂಧಿಸಿ ಠಾಣೆಗೆ ಕರೆದೊಯ್ಯಲಾಗಿದೆ. ಶುಕ್ರವಾರದಂದು ಯಶ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರದಂದು ನಡೆಯಲಿದೆ.











Click it and Unblock the Notifications