ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ. 19ರಿಂದ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

|
Google Oneindia Kannada News

ಮುಂಬೈ, ಫೆಬ್ರವರಿ 12 : ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈಗ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿದ ಬಳಿಕ ತರಗತಿಗಳು ಆರಂಭವಾಗುತ್ತಿವೆ.

ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಮಂತ್ ಈ ಕುರಿತು ಮಾಹಿತಿ ನೀಡಿದರು. "ಮಹಾರಾಷ್ಟ್ರ ಸರ್ಕಾರ ಫೆಬ್ರವರಿ 19ರಿಂದ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಿದೆ" ಎಂದು ಹೇಳಿದರು.

ಪ್ರತಿಭಟನೆ ವೇಳೆ ರಾಷ್ಟ್ರಗೀತೆ: ದೇಶದ ಮನಗೆದ್ದ ಬೆಂಗಳೂರು ಪೊಲೀಸ್ ಅಧಿಕಾರಿಪ್ರತಿಭಟನೆ ವೇಳೆ ರಾಷ್ಟ್ರಗೀತೆ: ದೇಶದ ಮನಗೆದ್ದ ಬೆಂಗಳೂರು ಪೊಲೀಸ್ ಅಧಿಕಾರಿ

ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡುವ ಕುರಿತು ಕೋಲ್ಕತ್ತಾ ಹೈಕೋರ್ಟ್ 2014ರ ಸೆಪ್ಟೆಂಬರ್ 22ರಂದು ತೀರ್ಪು ನೀಡಿತ್ತು. ಇದನ್ನು ಉಲ್ಲೇಖ ಮಾಡಿದ್ದ ಕೇಂದ್ರ ಸರ್ಕಾರ 2015ರಂದು ಒಂದು ಆದೇಶವನ್ನು ಹೊರಡಿಸಿತ್ತು.

ಪತ್ನಿ ರುಂಡದೊಂದಿಗೆ ಪೊಲೀಸ್‌ ಠಾಣೆಗೆ ಹೋಗಿ ರಾಷ್ಟ್ರಗೀತೆ ಹಾಡಿದ ಪತ್ನಿ ರುಂಡದೊಂದಿಗೆ ಪೊಲೀಸ್‌ ಠಾಣೆಗೆ ಹೋಗಿ ರಾಷ್ಟ್ರಗೀತೆ ಹಾಡಿದ

Singing National Anthem In Colleges Compulsory

ರಾಷ್ಟ್ರಗೀತೆಯಲ್ಲಿ ವಿದ್ಯಾರ್ಥಿಗಳು ಪೂರ್ಣವಾಗಿ ಹಾಡಬೇಕು ಎಂದು ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ಕಳಿಸಿತ್ತು. 2015ರ ಏಪ್ರಿಲ್‌ನಲ್ಲಿ ಕರ್ನಾಟಕ ಸರ್ಕಾರ ಪದವಿ ಪೂರ್ವ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ ಎಂದು ಸೂಚನೆ ನೀಡಿತ್ತು.

ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಸ್ಥಾನಮಾನವಿಲ್ಲ: ದೆಹಲಿ HCವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಸ್ಥಾನಮಾನವಿಲ್ಲ: ದೆಹಲಿ HC

ಪ್ರಸ್ತುತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಲಾಗುತ್ತಿದೆ. ಕಾಲೇಜುಗಳಲ್ಲಿ ಹಾಡಬೇಕು ಎಂಬ ಸೂಚನೆ ಇದ್ದರೂ ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿಲ್ಲ. ಈಗ ಮಹಾರಾಷ್ಟ್ರ ಸರ್ಕಾರ ಇದನ್ನು ಕಡ್ಡಾಯಗೊಳಿಸಲು ಮುಂದಾಗಿದೆ.

English summary
Maharashtra government to make singing national anthem in colleges compulsory from 19th February, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X