ಸೊಹ್ರಾಬುದ್ದಿನ್ ಕೇಸ್: ಎಲ್ಲಾ 22 ಆರೋಪಿಗಳು ಖುಲಾಸೆ

ಮುಂಬೈ, ಡಿಸೆಂಬರ್ 21: ಬಹಳ ನಿರೀಕ್ಷೆ ಹುಟ್ಟಿಸಿರುವ ಸೊಹ್ರಾಬುದ್ದಿನ್ ಶೇಕ್ ಮತ್ತು ತುಳಸಿರಾಮ್ ಪ್ರಜಾಪತಿ ಎನ್ ಕೌಂಟರ್ ಪ್ರಕರಣದ ತೀರ್ಪು ಹೊರಬಿದ್ದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳ ಕೊರತೆಯ ಕಾರಣ ನೀಡಿ ಎಲ್ಲಾ 22 ಆರೋಪಿಗಳನ್ನೂ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

ಸೋಹ್ರಾಬುದ್ದಿನ್ ಮತ್ತು ತುಳಸಿರಾಮ ಪ್ರಜಾಪತಿ ಅವರನ್ನು ಪಿತೂರಿ ನಡೆಸಿ ಕೊಲೆ ಮಾಡಲಾಗಿದೆ ಎಂಬುದಕ್ಕೆ ಪ್ರಬಲ ಸಾಕ್ಷ್ಯಗಳಿಲ್ಲದ ಕಾರಣ ಆರೋಪಿಗಳನ್ನು ಖುಲಾಸೆ ಮಾಡುತ್ತಿರುವುದಾಗಿ ಅದು ಹೇಳಿದೆ.

ರಾಜಸ್ಥಾನ ಮತ್ತು ಗುಜರಾತ್ ನ ಜಂಟಿ ಪೊಲೀಸ್ ತಂಡ ಸೊಹ್ರಾಬುದ್ದಿನ್ ನನ್ನು 2005ರಲ್ಲಿ ಮತ್ತು ಆತನ ಹತ್ತಿರದ ಸಹಚರ ತುಳಸಿರಾಮ್ ಪ್ರಜಾಪತಿಯನ್ನು 2006ರಲ್ಲಿ ಎನ್ಕೌಂಟರ್ ಮಾಡಿ ಸಾಯಿಸಿತ್ತು. ಈವೆರಡೂ ಎನ್ಕೌಂಟರ್ ಗಳು ನಕಲಿ ಎಂದು ಆರೋಪಿಸಲಾಗಿತ್ತು.

ಆದರೆ ಸೊಹ್ರಾಬುದ್ದಿನ್ ಗೆ ಲಷ್ಕರ್-ಇ-ತೈಯ್ಬಾ ಮತ್ತು ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕವಿತ್ತು ಎಂಬ ಕಾರಣ ನೀಡಿ ಆತನನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕೈವಾಡವೂ ಇದೆ ಎಂದು ವಾದಿಸಲಾಗಿತ್ತು.

Sohrabuddin Shaikh encounter: Special CBI court pronounces its verdict

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 210 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದ್ದು, ತೀರ್ಪು ಇಂದು ಹೊರಬಿದ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+