Get Updates
Get notified of breaking news, exclusive insights, and must-see stories!

ಸೊಹ್ರಾಬುದ್ದಿನ್ ಕೇಸ್: ಡಿ.21ರಂದು ಸಿಬಿಐ ನ್ಯಾಯಾಲಯದಿಂದ ತೀರ್ಪು

ಮುಂಬೈ, ಡಿಸೆಂಬರ್ 20: ಬಹಳ ನಿರೀಕ್ಷೆ ಹುಟ್ಟಿಸಿರುವ ಸೊಹ್ರಾಬುದ್ದಿನ್ ಶೇಕ್ ಮತ್ತು ತುಳಸಿರಾಮ್ ಪ್ರಜಾಪತಿ ಎನ್ ಕೌಂಟರ್ ಪ್ರಕರಣದದ ತೀರ್ಪನ್ನು ಡಿ.21 ರಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

ರಾಜಸ್ಥಾನ ಮತ್ತು ಗುಜರಾತ್ ನ ಜಂಟಿ ಪೊಲೀಸ್ ತಂಡ ಸೊಹ್ರಾಬುದ್ದಿನ್ ನನ್ನು 2005ರಲ್ಲಿ ಮತ್ತು ಆತನ ಹತ್ತಿರದ ಸಹಚರ ತುಳಸಿರಾಮ್ ಪ್ರಜಾಪತಿಯನ್ನು 2006ರಲ್ಲಿ ಎನ್ಕೌಂಟರ್ ಮಾಡಿ ಸಾಯಿಸಿತ್ತು. ಈವೆರಡೂ ಎನ್ಕೌಂಟರ್ ಗಳು ನಕಲಿ ಎಂದು ಆರೋಪಿಸಲಾಗಿತ್ತು.

ಆದರೆ ಸೊಹ್ರಾಬುದ್ದಿನ್ ಗೆ ಲಷ್ಕರ್-ಇ-ತೈಯ್ಬಾ ಮತ್ತು ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕವಿತ್ತು ಎಂಬ ಕಾರಣ ನೀಡಿ ಆತನನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕೈವಾಡವೂ ಇದೆ ಎಂದು ವಾದಿಸಲಾಗಿತ್ತು.

Sohrabuddin Shaikh encounter: Special CBI court verdict expected tomorrow

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 210 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದ್ದು, ತೀರ್ಪು ನಾಳೆ ಹೊರಬೀಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+