ರಜನೀಕಾಂತ್ ನಟನೆಯ 'ದರ್ಬಾರ್' ಚಿತ್ರೀಕರಣ ವೇಳೆ ಕಲ್ಲೆಸೆತ
ಮುಂಬೈ, ಮೇ 2: ರಜನೀಕಾಂತ್ ಹಾಗೂ ನಯನತಾರಾ ಅಭಿನಯದ, ಎ.ಆರ್.ಮುರುಗದಾಸ್ ನಿರ್ದೇಶನದಲ್ಲಿ 'ದರ್ಬಾರ್' ಸಿನಿಮಾ ಚಿತ್ರೀಕರಣ ನಡೆಯುವ ವೇಳೆ ಕಾಲೇಜು ವಿದ್ಯಾರ್ಥಿಗಳು ಕಲ್ಲು ಎಸೆದಿದ್ದಾರೆ. ಕಾಲೇಜೊಂದರಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಅದರ ಫೋಟೋ ತೆಗೆಯುತ್ತಿದ್ದವರಿಗೆ, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದವರಿಗೆ ಚಿತ್ರ ತಂಡ ಆಕ್ಷೇಪಿಸಿತ್ತು.
ಇದರಿಂದ ರೊಚ್ಚಿಗೆದ್ದ ಕಾಲೇಜು ವಿದ್ಯಾರ್ಥಿಗಳು ಚಿತ್ರ ತಂಡದ ಮೇಲೆ ಕಲ್ಲೆಸೆದಿದೆ. ಈ ಘಟನೆ ನಡೆದ ಮೇಲೆ ಮುರುಗದಾಸ್ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಜತೆಗೆ ಚಿತ್ರೀಕರಣವನ್ನೇ ಬೇರೆಡೆ ನಡೆಸಲು ಚಿಂತಿಸುತ್ತಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇದೇ ಮೊದಲ ಬಾರಿಗೆ ರಜನೀಕಾಂತ್ ಚಿತ್ರವನ್ನು ಮುರುಗದಾಸ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಜನೀ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣವು ಮುಂಬೈನಲ್ಲಿ ಏಪ್ರಿಲ್ ಇಪ್ಪತ್ತೆರಡರಿಂದ ಆರಂಭವಾಗಿದೆ. ಇಪ್ಪತ್ತೈದು ವರ್ಷಕ್ಕೂ ಹಿಂದೆ ಪಾಂಡಿಯನ್ ಎಂಬ ಸಿನಿಮಾದಲ್ಲಿ ರಜನೀಕಾಂತ್ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು. ಆ ನಂತರ ಈಗಲೇ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
No need of movie Poster jus a Shooting spot still is enough to gve a goosebumps #Thalaivaaaaaaa🔥🔥🔥🔥🔥 #Darbar #darbarpongal2020 pic.twitter.com/uuCqiyUexr
— Eshu Eshwar (@its_me_eshu) 23 April 2019
ದರ್ಬಾರ್ ಸಿನಿಮಾವನ್ನು ಮುಂದಿನ ವರ್ಷದ ಸಂಕ್ರಾಂತಿಗೆ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡಕ್ಕೆ ಇದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications