ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಗುರುವಾರವೇ ಬಹುಮತ ಸಾಬೀತಿಗೆ ಸುಪ್ರೀಂಕೋರ್ಟ್ ಸೂಚನೆ

|
Google Oneindia Kannada News

ಮುಂಬೈ, ಜೂನ್ 29: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಸುಪ್ರೀಂಕೋರ್ಟ್ ಅಂಗಳಕ್ಕೆ ಹೋಗಿದ್ದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಣಕ್ಕೆ ಸರ್ವೋಚ್ಛ ನ್ಯಾಯಾಲಯದಲ್ಲೂ ತೀವ್ರ ಹಿನ್ನಡೆಯಾಗಿದೆ.

ರಾಜ್ಯಪಾಲರ ಸೂಚನೆಯಂತೆ ಜೂನ್ 30ರಂದೇ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ನಾಳೆಯೇ ವಿಶ್ವಾಸಮತಯಾತನೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಗುರುವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವಿಧಾನಸಭೆಯಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರವು ಬಹುಮತ ಸಾಬೀತುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Uddhav Thackeray govt Must Prove Majority on June 30 Says Supreme Court

ಸುಪ್ರೀಂಕೋರ್ಟ್ ಸೂಚನೆ ಬೆನ್ನಲ್ಲೇ ರಾಜೀನಾಮೆ:

ಗುರುವಾರ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಎರಡು ವರ್ಷಗಳ ತಮ್ಮ ಆಡಳಿತವು ತೃಪ್ತಿ ತಂದಿದೆ ಎಂದರು. ಶರದ್ ಪವಾರ್ ಮತ್ತು ಸೋನಿಯಾ ಗಾಂಧಿಗೆ ಧನ್ಯವಾದ ತಿಳಿಸಿದರು.

ಮುಖ್ಯಮಂತ್ರಿ ಸ್ಥಾನದ ಜೊತೆಗೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ಉದ್ಧವ್ ಠಾಕ್ರೆ ರಾಜೀನಾಮೆಯನ್ನು ಘೋಷಿಸಿದ್ದಾರೆ. "ನಾನು ಅನಿರೀಕ್ಷಿತ ರೀತಿಯಲ್ಲಿ ಅಧಿಕಾರಕ್ಕೆ ಬಂದಿದ್ದೇನೆ ಮತ್ತು ನಾನು ಅದೇ ರೀತಿಯಲ್ಲಿ ಹೊರಡುತ್ತಿದ್ದೇನೆ. ನಾನು ಶಾಶ್ವತವಾಗಿ ಹೋಗುವುದಿಲ್ಲ, ನಾನು ಇಲ್ಲೇ ಇರುತ್ತೇನೆ ಮತ್ತು ಮತ್ತೊಮ್ಮೆ ಶಿವಸೇನಾ ಭವನದಲ್ಲಿ ಕುಳಿತುಕೊಳ್ಳುತ್ತೇನೆ. ನನ್ನ ಎಲ್ಲಾ ಜನರನ್ನು ನಾನು ಒಟ್ಟುಗೂಡಿಸುವೆನು. ನಾನು ಸಿಎಂ ಮತ್ತು ಎಂಎಲ್‌ಸಿ ಸ್ಥಾನಕ್ಕೆ ಈಗ ರಾಜೀನಾಮೆ ನೀಡುತ್ತಿದ್ದೇನೆ," ಎಂದು ಉದ್ಧವ್ ಠಾಕ್ರೆ ತಮ್ಮ ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದಾರೆ.

English summary
Supreme Court order to Uddhav Thackeray govt for Must Prove Majority Tomorrow. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X