ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಶಾಂತ್ ಸಿಂಗ್ ಕೇಸ್: ನಟಿ ರಿಯಾ ಚಕ್ರವರ್ತಿ ಬಂಧನವಾಗಿದ್ದು ಏಕೆ?

|
Google Oneindia Kannada News

ಮುಂಬೈ, ಸೆ. 8: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ ಪೆಡ್ಲರ್ ಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮಹತ್ವದ ಬೆಳವಣಿಗೆಯಲ್ಲಿ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿಯನ್ನು ಮಾದಕ ವಸ್ತು ನಿಯಂತ್ರಣ ದಳ(ಎನ್ ಸಿಬಿ) ಇಂದು ಮಧ್ಯಾಹ್ನ ಬಂಧಿಸಿದೆ.

Recommended Video

IPL 2020 ಈ ಬಾರಿ ಭಾರತದ ಆಟಗಾರರಿಗೆ ಕೊಂಚ ಕಷ್ಟವಾಗಲಿದೆ | Oneindia Kannada

ನಟಿ ರಿಯಾ ಚಕ್ರವರ್ತಿ ಸೋದರ ಶೋವಿಕ್, ಬಾಣಸಿಗ ದೀಪೇಶ್, ಸ್ಯಾಮುಯಲ್ ಮಿರಾಂಡರನ್ನು ಮಾದಕ ವಸ್ತು ನಿಯಂತ್ರಣ ದಳ(ಎನ್ ಸಿಬಿ)ದವರು ಈಗಾಗಲೇ ಕಸ್ಟಡಿಗೆ ಪಡೆದುಕೊಂಡಿದೆ. ಎಲ್ಲಾ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿರುವ ಅಧಿಕಾರಿಗಳು, ಸೆಪ್ಟಂಬರ್ 9ರ ವರೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ರಿಯಾ ಚಕ್ರವರ್ತಿಯನ್ನು ಇಂದು ಕೋರ್ಟ್ ಮುಂದೆ ಹಾಜರು ಪಡಿಸಲಾಗುತ್ತಿದೆ.

ಸುಶಾಂತ್ ಕೇಸ್: ಕಾರ್ಪೊರೇಟರ್ ಮಗ ನಾಪತ್ತೆ, NCB ನೋಟಿಸ್ಸುಶಾಂತ್ ಕೇಸ್: ಕಾರ್ಪೊರೇಟರ್ ಮಗ ನಾಪತ್ತೆ, NCB ನೋಟಿಸ್

ಶೌವಿಕ್ ವಿಚಾರಣೆಯ ವೇಳೆ ಡ್ರಗ್ಸ್ ಯಾರಿಗೆಲ್ಲಾ ನೀಡುತ್ತಿದ್ದ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಿದ್ದು, ರಿಯಾ ಚಕ್ರವರ್ತಿ ಕೂಡಾ ಪ್ರಾಥಮಿಕ ವಿಚಾರಣೆ ವೇಳೆ ಡ್ರಗ್ಸ್ ಸೇವನೆ, ಡ್ರಗ್ಸ್ ಪೂರೈಕೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಜೂನ್ 14ರಂದು 34 ವರ್ಷ ವಯಸ್ಸಿನ ಬಿಹಾರ ಮೂಲದ ನಟ ಸುಶಾಂತ್ ಸಿಂಗ್ ಅವರ ದೇಹವು ಬಾಂದ್ರಾದ ಅವರ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಕಗ್ಗಂಟಾಗಿರುವ ಸಂದರ್ಭದಲ್ಲಿ ಮರಣೋತ್ತರ ಪರೀಕ್ಷೆ ವರದಿ ಮಹತ್ವ ಪಡೆದುಕೊಂಡಿತ್ತು.

ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣ

ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣ

ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ನಟಿ ರಿಯಾ ಸೇರಿದಂತೆ ಹಲವರ ಮೇಲೆ ಎಫ್ಐಆರ್ ಹಾಕಲಾಗುತ್ತದೆ. ಎನ್ ಡಿ ಪಿಎಸ್ ಕಾಯ್ದೆ ಸೆಕ್ಷನ್ 21, 21 ಸಿ, 27 ಎ, 27 ಬಿ, 29 ಹಾಗೂ ಐಪಿಸಿ ಸೆಕ್ಷನ್ 120 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಹಾಕಿರುವ ಸೆಕ್ಷನ್ ಪ್ರಕರಣ ಆರೋಪಿಗಳ ಮೇಲಿನ ಆರೋಪ ಸಾಬೀತಾದರೆ ಕನಿಷ್ಠ 10 ರಿಂದ 20 ವರ್ಷ ಜೈಲುಶಿಕ್ಷೆ ಹಾಗೂ 1 ಲಕ್ಷ ರು ತನಕ ದಂಡ ವಿಧಿಸಬಹುದು.

ಬಂಧನಕ್ಕೆ ರಿಯಾ ಸಿದ್ಧವಾಗಿದ್ದಾರೆ

ಬಂಧನಕ್ಕೆ ರಿಯಾ ಸಿದ್ಧವಾಗಿದ್ದಾರೆ

ಮೂರು ದಿನಗಳ ಕಾಲ ಕಸ್ಟಡಿಯಲ್ಲಿದ್ದ ರಿಯಾಳನ್ನು ವಿಚಾರಣೆ ನಂತರ ಬಂಧಿಸುವ ಸಾಧ್ಯತೆ ದಟ್ಟವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಯಾ ಚಕ್ರವರ್ತಿಯ ವಕೀಲ ಸತೀಶ್ ಮನೆಶಿಂಡೆ, 'ಬಂಧನಕ್ಕೆ ರಿಯಾ ಸಿದ್ಧವಾಗಿದ್ದಾರೆ. ಇದೊಂದು ದುರುದ್ದೇಶಪೂರ್ವಕ ಬಂಧನವಾದ್ದರಿಂದ ಆಕೆ ಎಲ್ಲದಕ್ಕೂ ತಯಾರಾಗಿದ್ದಾರೆ' ಎಂದಿದ್ದರು.

 ವಾಟ್ಸಪ್ ಚಾಟ್ ಬಹಿರಂಗವಾದ ಬಳಿಕ ದಾಳಿ

ವಾಟ್ಸಪ್ ಚಾಟ್ ಬಹಿರಂಗವಾದ ಬಳಿಕ ದಾಳಿ

ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಸಹೋದರ ಶೋವಿಕ್ ಸೇರಿದ್ದಂತೆ ಅನೇಕ ಡ್ರಗ್ಸ್ ಪೆಡ್ಲರ್ ಗಳ ಜೊತೆಗಿನ ವಾಟ್ಸಪ್ ಚಾಟ್ ಬಹಿರಂಗವಾದ ಬಳಿಕ ಮನೆಗಳ ಮೇಲೆ ದಾಳಿ ನಡೆಸಿದ್ದರು. ಮಾದಕ ವಸ್ತು ನಿಯಂತ್ರಣ ಇಲಾಖೆ ಆಗಸ್ಟ್ 25ರಂದು ಸುಶಾಂತ್ ಸಿಂಗ್ ಪ್ರೇಯಸಿ ರಿಯಾ, ಸಹೋದರ ಶೋವಿಕ್, ಗೌರವ್ ಆರ್ಯ, ಜಯ ಸಹಾ, ಶ್ರುತಿ ಮೋದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಸಿತ್ತು.

ಜಾರಿ ನಿರ್ದೇಶನಾಲಯದಿಂದಲೂ ತನಿಖೆ

ಜಾರಿ ನಿರ್ದೇಶನಾಲಯದಿಂದಲೂ ತನಿಖೆ

ಪಾಟ್ನಾ ಪೊಲೀಸ್ ಎಫ್ ಐ ಆರ್ ಆಧರಿಸಿ ಇಡಿ ಇಲಾಖೆ ರಿಯಾ ಚಕ್ರವರ್ತಿ ಹಾಗು ಇನ್ನಿತರ 8 ಜನರ ವಿರುದ್ಧ ಮನಿ ಲ್ಯಾಂಡರಿಂಗ್ ಕೇಸ್ ನಮೂದಿಸಿದ್ದಾರೆ. ಈ ಕುರಿತಂತೆ ರಿಯಾ ವಿಚಾರಣೆ ಎದುರಿಸಿ ಸುಶಾಂತ್ ಜೊತೆಗಿನ ವ್ಯವಹಾರಿಕ ಸಂಬಂಧದ ಬಗ್ಗೆ ವಿವರ ನೀಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ ಜೊತೆ ಕೆಲಸ ಮಾಡಿರುವ ರಿಯಾ ಅವರ ಮ್ಯಾನೇಜರ್ ಶ್ರುತಿ ಮೋದಿಗೂ ಇಡಿ ಸಮನ್ಸ್ ನೀಡಿತ್ತು. ರಿಯಾ ಅವರ ಸಹೋದರ ಶೌವಿಕ್ ಚಕ್ರವರ್ತಿ ವಿರುದ್ಧ ಸಹ ದೂರು ದಾಖಲಾಗಿದೆ. ಶುಕ್ರವಾರ ರಿಯಾ, ಶ್ರುತಿ ಮತ್ತು ಶೋಯಿಕ್ ಅವರ ಹೇಳಿಕೆಗಳನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗಿದೆ. ಆದರೆ, ಇದೆಲ್ಲದರಿಂದ ಬಚಾವಾದರೂ ಈಗ ಶೌವಿಕ್ ಮೂಲಕ ರಿಯಾ ಸುಶಾಂತ್ ಗೆ ಡ್ರಗ್ಸ್, ಗಾಂಜಾ ನೀಡುತ್ತಿದ್ದಳು ಎಂಬ ಆರೋಪದಲ್ಲಿ ಸಿಲುಕುವ ಸಾಧ್ಯತೆಯಿದೆ.

English summary
Sushant Singh Case: Actor Rhea Chakraborty arrested by Narcotics Control Bureau (NCB) in Mumbai: KPS Malhotra, Deputy Director, Narcotics Control Bureau.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X